ಶಿವಮೊಗ್ಗ : ಜಿಲ್ಲೆಯಲ್ಲಿ ಜಾನುವಾರಗಳಲ್ಲಿ ಚರ್ಮಗಂಟು ರೋಗ ಹರಡುವುದನ್ನು ತಡೆಗಟ್ಟಲು ಮುಂಜಾಗ್ರತಾ ಕ್ರಮವಾಗಿ ದಿನಾಂಕ: 14-11-2022 ರಿಂದ 30-11-2022 ರವರೆಗೆ ಕರ್ನಾಟಕ ಅನಿಮಲ್ ಡಿಸೀಸ್(ಕಂಟ್ರೋಲ್)ಆಕ್ಟ್ 1961 ಮತ್ತು ಸಿಆರ್ಪಿಸಿ ಕಲಂ 144 ರ ಮೇರೆಗೆ ಜಿಲ್ಲೆಯಾದ್ಯಂತ ಜಾನುವಾರ ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆ ಮಾಡುವುದನ್ನು ನಿಷೇಧಿಸಿ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಆದೇಶಿಸಿದ್ದಾರೆ.
ಈ ಆದೇಶವು ಸಾಮೂಹಿಕವಾಗಿ ಜಾನುವಾರುಗಳು ಸೇರುವಂತಹ ಜಾನುವಾರು ಸಂತೆ, ಜಾನುವಾರು ಜಾತ್ರೆ ಮತ್ತು ಜಾನುವಾರು ಸಾಗಾಣಿಕೆಗೆ ಮಾತ್ರ ಅನ್ವಯವಾಗುತ್ತಿದ್ದು, ಇದನ್ನು ಹೊರತುಪಡಿಸಿ ಬೇರೆ ಯಾವ ಉದ್ದೇಶಕ್ಕೂ ಅನ್ವಯಿಸುವುದಿಲ್ಲ. ಈ ಆದೇಶವನ್ನು ಉಲ್ಲಂಘಿಸುವವರ ವಿರುದ್ದ ಭಾರತೀಯ ದಂಡ ಸಂಹಿತೆ ಕಲಂ 188 ರ ಪ್ರಕಾರ ಕ್ರಮವನ್ನು ಜರುಗಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
BIGG NEWS: ಕಡೂರು ಕ್ಷೇತ್ರದ ಅಭಿವೃದ್ಧಿಗೆ 2,800 ಕೋಟಿ ಅನುದಾನ; ಸಿಎಂ ಬೊಮ್ಮಾಯಿ