ಬೆಂಗಳೂರು : ಸಿಇಟಿ (CET) 2022 ದಾಖಲೆ ಪರಿಶೀಲನೆಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಕ್ಟೋಬರ್ 11 ರವರೆಗೆ ಅವಕಾಶ ನೀಡಿದೆ.
BIGG NEWS : `SC-ST’ ಮೀಸಲಾತಿ 2-3 ದಿನದಲ್ಲಿ ರಾಜ್ಯ ಸರ್ಕಾರದಿಂದ ಅಧಿಕೃತ ಆದೇಶ : ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ
ಯುಜಿ ಸಿಇಟಿ-2022 ಕ್ಕೆ ವ್ಯಾಸಂಗ ಪ್ರಮಾಣ ಪತ್ರ, ಕನ್ನಡ ಮಾಧ್ಯಮ ಮತ್ತಿತರ ದಾಖಲೆಗಳನ್ನು ಈವರೆಗೆ ಸಲ್ಲಿಸದೇ ಇರುವ ಅಭ್ಯರ್ಥಿಗಳು ಸೀಟು ಹಂಚಿಕೆಯಲ್ಲಿ ಪಾಲ್ಗೊಳ್ಳಲು ದಾಖಲೆ ಪರಿಶೀಲನೆಗೆ ನೀಡಿದ್ದ ಗಡುವನ್ನು ಅಕ್ಟೋಬರ್ 11 ರವರೆಗೆ ವಿಸ್ತರಿಸಲಾಗಿದೆ.
ಹಲವು ಅಭ್ಯರ್ಥಿಗಳು ವ್ಯಾಸಂಗ ಪ್ರಮಾಣಪತ್ರ, ಕನ್ನಡ ಮಾಧ್ಯಮ ಮತ್ತಿತರ ದಾಖಲೆಗಳನ್ನು ಸಲ್ಲಿಸಲು ಅಕ್ಟೋಬರ್ 8 ರವರೆಗೆ ಅವಕಾಶ ನೀಡಲಾಗಿತ್ತು. ಆದರೆ ಕೆಲವರು ಇನ್ನೂ ದಾಖಲೆ ಸಲ್ಲಿಸದಿರುವ ಹಿನ್ನೆಲೆಯಲ್ಲಿ ಸಮಯಾವಕಾಶವನ್ನು ಅ.11 ರಂದು ಬೆಳಗ್ಗೆ 9.30 ಕ್ಕೆ ಅಗತ್ಯ ದಾಖಲೆಗಳೊಂದಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಹಾಜರಾಗಬೇಕು ಎಂದು ತಿಳಿಸಿದೆ.
ಅಭ್ಯರ್ಥಿಗಳು .karnataka.gov.in. ದಾಖಲೆಗಳ ಪರಿಶೀಲನೆ ಪ್ರಕ್ರಿಯೆಯಲ್ಲಿ ಕಾಣಿಸಿಕೊಳ್ಳಬಹುದಾದ ಅಭ್ಯರ್ಥಿಗಳ ಹೆಸರನ್ನು ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು KEA – cetonline ನ ಅಧಿಕೃತ ವೆಬ್ ಸೈಟ್ ನಲ್ಲಿ ದಾಖಲೆ ಪರಿಶೀಲನೆಯ ಕುರಿತು ಹೆಚ್ಚಿನ ವಿವರಗಳನ್ನು ಪರಿಶೀಲಿಸಬಹುದು.