ಬೆಂಗಳೂರು: ಸಿಇಟಿ ರ್ಯಾಂಕ್ (CET RANK) ರದ್ದುಪಡಿಸಿದ ಹೈಕೋರ್ಟ್ ಏಕ ಸದಸ್ಯ ಪೀಠದ ಆದೇಶದ ವಿರುದ್ಧ ಕೆಇಎ ಮತ್ತೆ ಹೈಕೋರ್ಟ್ ಗೆ ಮೇಲ್ಮನವಿ ಸಲ್ಲಿಸಲು ಮುಂದಾಗಿದೆ.
ಸಿಇಟಿ ಪುನರಾವರ್ತಿತ ವಿದ್ಯಾರ್ಥಿಗಳ ಪಿಯುಸಿ ಅಂಕ ಪರಿಗಣಿಸಿ ಎಂದು ಹೈಕೋರ್ಟ್ ಆದೇಶ ಮಾಡಿತ್ತು. ಸಿಇಟಿ 75 ಅಂಕ, 25 ಪಿಯುಸಿ ಅಂಕ ಪರಿಗಣಿಸಬಹುದೇ ಎಂದು ಕೋರ್ಟ್ ಸಲಹೆ ನೀಡಿತ್ತು. ಈ ಸಲಹೆಯನ್ನ ಕೆಇಎ ಒಪ್ಪಿರಲಿಲ್ಲ. ಈಗ ಹೈಕೋರ್ಟ್ಗೆ ಮೇಲ್ಮನವಿ ಸಲ್ಲಿಕೆಗೆ ನಿರ್ಧಾರ ಮಾಡಲಾಗಿದೆ.
BIGG NEWS: ಬೆಂಗಳೂರಿನಲ್ಲಿ ಇನ್ನೂ ಮೂರು ದಿನ ಗುಡುಗು ಸಹಿತ ಮಳೆ; ಹವಾಮಾನ ಇಲಾಖೆ ಸೂಚನೆ
ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ 2020-21ನೇ ಸಾಲಿನಲ್ಲಿ ದ್ವಿತೀಯ ಪಿಯು ತೇರ್ಗಡೆಯಾದ ವಿದ್ಯಾರ್ಥಿಗಳು ಗಳಿಸಿದ ಶೇ 50 ಹಾಗೂ ಸಿಇಟಿಯಲ್ಲಿ ಪಡೆದ ಶೇ 50ರಷ್ಟು ಅಂಕಗಳನ್ನು ಪರಿಗಣಿಸಿ ಹೊಸದಾಗಿ ರ್ಯಾಂಕ್ ಪಟ್ಟಿ ಪ್ರಕಟಿಸಬೇಕು ಎಂದು ಹೈಕೋರ್ಟ್ ಹೇಳಿತ್ತು. ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ 2020-21ನೇ ಸಾಲಿನ ಪಿಯು ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಪರಿಗಣಿಸಲಾಗದು ಎಂದು 2022 ಜುಲೈ 30ರಂದು ಕೆಇಎ ಆದೇಶ ಹೊರಡಿಸಿತ್ತು.
BREAKING NEWS : ಬೆಂಗಳೂರಿಗರೇ ಎಚ್ಚರ .. ಎಚ್ಚರ..! ವಿದ್ಯಾರಣ್ಯಪುರದಲ್ಲಿ ʻ ಒಂಟಿ ಮಹಿಳೆಯ ಭೀಕರ ಕೊಲೆ ʼ