ಬೆಂಗಳೂರು : ಸ್ವಾತಂತ್ರ್ಯದ ಅಮೃತಮಹೋತ್ಸವದ ಸವಿನೆನಪಿಗಾಗಿ ಕುಶಲಕರ್ಮಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಕುಶಲ ಕಾರ್ಮಿಕರಿಗೆ ತಲಾ 50 ಸಾವಿರ ರೂ. ವರೆಗೆ ಸಾಲ-ಸಹಾಯಧನ ಯೋಜನೆ ಜಾರಿಗೊಳಿಸಲಾಗುವುದು ಎಂದು ಘೋಷಿಸಿದ್ದಾರೆ.

ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ಸೋಮವಾರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿಗಳು, ಭಜಂತ್ರಿ, ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮಾದರು ಸೇರಿ ಎಲ್ಲಾ ಕುಶಲಕರ್ಮಿಗಳಿಗೆ ತಲಾ 50 ಸಾವಿರ ರೂ. ಸಾಲ-ಸಹಾಯಧನ ಯೋಜನೆ ಜಾರಿಗೊಳಿಸಲಾಗುವುದು ಎಂದು ಹೇಳಿದ್ದಾರೆ.

ಹೊಸ ಯೋಜನೆಗಳ ಘೋಷಣೆ

ಸ್ವಾತಂತ್ರ್ಯ ಅಮೃತ ಮಹೋತ್ಸವದ ಸವಿನೆನಪಿಗಾಗಿ ಹಲವು ಹೊಸ ಯೋಜನೆಗಳನ್ನು ಬೊಮ್ಮಾಯಿ ಘೋಷಿಸಿದ್ದಾರೆ.

ರಾಜ್ಯದ ಎಲ್ಲ ಸರ್ಕಾರಿ ಶಾಲೆ, ಕಾಲೇಜುಗಳಲ್ಲಿ ಸಂಪೂರ್ಣವಾಗಿ ಶೌಚಾಲಯಗಳ ನಿರ್ಮಾಣ 250 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲಾಗುವುದು.

ಕರ್ನಾಟಕ ಕರಕುಶಲ ಅಭಿವೃದ್ಧಿ ನಿಗಮದಿಂದ ಕುಂಬಾರ, ಕಮ್ಮಾರ, ಬಡಗಿ, ಶಿಲ್ಪಿ ಗಳು, ಭಜಂತ್ರಿ ಬುಟ್ಟಿ ಹೆಣೆಯುವವರು, ವಿಶ್ವಕರ್ಮರು, ಮೇದರು ಸೇರಿದಂತೆ ಇತರ ಕುಶಲಕರ್ಮಿಗಳಿಗೆ ತಲಾ  50 ಸಾವಿರ ರೂ. ಸಾಲದ ಸಹಾಯಧನ ಯೋಜನೆ.

ಭೂ ರಹಿತ ಕೃಷಿ ಕಾರ್ಮಿಕರ ಮಕ್ಕಳಿಗೂ ರೈತರ ವಿದ್ಯಾನಿಧಿ ಯೋಜನೆ ವಿಸ್ತರಿಸುತ್ತೇವೆ. ರಾಜ್ಯದಲ್ಲಿ ಹೊಸದಾಗಿ 4050 ಅಂಗನವಾಡಿ ತೆರೆಯಲಾಗುವುದು. ಆ ಮೂಲಕ 16 ಲಕ್ಷ ಕುಟುಂಬಗಳಿಗೆ ಪೌಷ್ಟಿಕ ಆಹಾರ ಒದಗಿಸುತ್ತೇವೆ. ಲಾ ಪೂರ್ವ ಶಿಕ್ಷಣ ನೀಡಲು ಅವಕಾಶ ಕಲ್ಪಿಸುತ್ತೇವೆ. 8100 ಮಹಿಳೆಯರಿಗೂ ಇದರಿಂದ ಉದ್ಯೋಗವಕಾಶ ದೊರೆಯಲಿದೆ.

ಕರ್ತವ್ಯ ನಿರತ ಸೈನಿಕ ಮೃತಪಟ್ಟರೆ, ಆ ಕುಟುಂಬದ ಒಬ್ಬ ಸದಸ್ಯರಿಗೆ ಅನುಕಂಪದ ಆಧಾರದಲ್ಲಿ ಸರ್ಕಾರಿ ನೌಕರಿ, ₹ 25 ಲಕ್ಷ ಪರಿಹಾರ ಕೊಡುತ್ತೇವೆ ಎಂದು ಘೋಷಿಸಿದರು.

Share.
Exit mobile version