ಬೆಂಗಳೂರು : ಮಳೆಹಾನಿ ಪರಿಹಾರದಲ್ಲಿ ರಾಜ್ಯ ಸರ್ಕಾರ ತಾರತಮ್ಯ ಮಾಡಿದೆ ಎನ್ನುವ ಆರೋಪಕ್ಕೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಸ್ಪಷ್ಟನೆ ನೀಡಿದ್ದಾರೆ.
ಈ ಸಂಬಂಧ ಟ್ವೀಟ್ ಮಾಡಿರುವ ಸಿಎಂ ಬೊಮ್ಮಾಯಿ, ಪ್ರಕೃತಿ ವಿಕೋಪದ ಪರಿಹಾರ ಕಾರ್ಯಗಳಿಗೆ ಜಿಲ್ಲಾಧಿಕಾರಿಗಳ ಪಿ ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನವನ್ನು ಆಧರಿಸಿ ಹಣ ಬಿಡುಗಡೆ ಮಾಡಲಾಗುತ್ತದೆ. ಇದೇ ಆಗಸ್ಟ್ 2 ರ ಮಾಹಿತಿಯಂತೆ ವಿಜಯಪುರ ಜಿಲ್ಲಾಧಿಕಾರಿಗಳ ಪಿ ಡಿ. ಖಾತೆಯಲ್ಲಿ 28.5 ಕೋಟಿ ರೂ. ಅನುದಾನ ಲಭ್ಯವಿದೆ ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಕೃತಿ ವಿಕೋಪದ ಪರಿಹಾರ ಕಾರ್ಯಗಳಿಗೆ ಜಿಲ್ಲಾಧಿಕಾರಿಗಳ ಪಿ ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನವನ್ನು ಆಧರಿಸಿ ಹಣ ಬಿಡುಗಡೆ ಮಾಡಲಾಗುತ್ತದೆ. ಇದೇ ಆಗಸ್ಟ್ 2 ರ ಮಾಹಿತಿಯಂತೆ ವಿಜಯಪುರ ಜಿಲ್ಲಾಧಿಕಾರಿಗಳ ಪಿ ಡಿ. ಖಾತೆಯಲ್ಲಿ 28.5 ಕೋಟಿ ರೂ. ಅನುದಾನ ಲಭ್ಯವಿದೆ.
1/2 https://t.co/7oOJP77Tx5— CM of Karnataka (@CMofKarnataka) August 8, 2022
ಪ್ರಕೃತಿ ವಿಕೋಪದ ಪರಿಹಾರ ಕಾರ್ಯಗಳಿಗೆ ಜಿಲ್ಲಾಧಿಕಾರಿಗಳ ಪಿ ಡಿ. ಖಾತೆಯಲ್ಲಿ ಲಭ್ಯವಿರುವ ಅನುದಾನವನ್ನು ಆಧರಿಸಿ ಹಣ ಬಿಡುಗಡೆ ಮಾಡಲಾಗುತ್ತದೆ. ಇದೇ ಆಗಸ್ಟ್ 2 ರ ಮಾಹಿತಿಯಂತೆ ಬೀದರ್ ಜಿಲ್ಲಾಧಿಕಾರಿಗಳ ಪಿ ಡಿ. ಖಾತೆಯಲ್ಲಿ 20.45 ಕೋಟಿ ರೂ., ಕಲಬುರ್ಗಿ ಜಿಲ್ಲಾಧಿಕಾರಿಗಳ ಬಳಿ 42.07 ಕೋಟಿ ರೂ, ಎಂದು ತಿಳಿಸಿದ್ದಾರೆ.
ಇತರ 21 ಜಿಲ್ಲೆಗಳಲ್ಲಿ ವಿಜಯಪುರ ಜಿಲ್ಲೆಗಿಂತ ಕಡಿಮೆ ಮೊತ್ತ ಲಭ್ಯವಿದೆ ಎಂಬುದು ಗಮನಿಸಬೇಕಾದ ಅಂಶ.
ಪ್ರಕೃತಿ ವಿಕೋಪದ ಪರಿಹಾರದಲ್ಲಿ ಯಾವುದೇ ತಾರತಮ್ಯ ಮಾಡುತ್ತಿಲ್ಲ. ಅಗತ್ಯಕ್ಕೆ ಅನುಗುಣವಾಗಿ ಕಾಲ ಕಾಲಕ್ಕೆ ಅನುದಾನ ಬಿಡುಗಡೆ ಮಾಡಲಾಗುತ್ತಿದೆ.
2/2— CM of Karnataka (@CMofKarnataka) August 8, 2022