ಬೆಂಗಳೂರು : ವಿಶ್ವ ಅಂಗಾಂಗ ದಾನ ದಿನಾಚರಣೆ ಅಂಗವಾಗಿ ಆಗಸ್ಟ್ 13 ರ ಇಂದು ಬೆಂಗಳೂರಿನಲ್ಲಿ ವಿಶೇಷ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಸೇರಿ ಸಚಿವ ಸಂಪುಟದ ವಿವಿಧ ಸಚಿವರು ಅಂಗಾಂಗ ದಾನಕ್ಕೆ ಹೆಸರು ನೋಂದಾಯಿಸಲಿದ್ದಾರೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅಂಗಾಂಗ ದಾನದ ಬಗ್ಗೆ ಸಾರ್ವಜನಿಕರಿಗೆ ಜಾಗೃತಿ ಮೂಡಿಸಲು ಇಂದು ಮೇಖ್ರಿ ವೃತ್ತದಿಂದ ಫ್ರೀಡಂ ಪಾರ್ಕ್ ವರೆಗೆ ಬೃಹತ್ ಜಾಗೃತಿ ಜಾಥಾ ನಡೆಸಲಾಗುವುದು. ವೈದ್ಯರು, ನರ್ಸ್ ಗಳು, ಆಶಾ ಕಾರ್ಯಕರ್ತರು, ಯುವಜನತೆ ಸೇರಿ 5 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಲಿದ್ದಾರೆ ಎಂದು ಮಾಹಿತಿ ನೀಡಿದ್ದಾರೆ.