ಬೆಂಗಳೂರು : ಅರಣ್ಯ ಪ್ರದೇಶಗಳ ವ್ಯಾಪ್ತಿಯಲ್ಲಿ ಕಾಡಾನೆಗಳ ಹಾವಳಿ ತಡೆಯಲು ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅರಣ್ಯ ಪ್ರದೇಶಗಳ ವ್ಯಾಪ್ತಿಯಲ್ಲಿ ಕಾಡಾನೆಗಳ ದಾಳಿ ತಡೆಗೆ ಹೊಸ ವಿಧಾನ ಬಳಸಲಾಗುತ್ತದೆ. ಕಾಡಾನೆ ದಾಳಿಯಿಂದ ಪ್ರಾಣಹಾನಿ, ಬೆಳೆ ನಷ್ಟವಾಗಿದೆ. ಕಾಡಾನೆ ಹಾವಳಿ ತಡೆಯಲು ರಾಜ್ಯ ಸರ್ಕಾರ 100 ಕೋಟಿ ರೂ. ಅನುದಾನ ನೀಡಲಾಗಿದೆ ಎಂದರು.
ಹುತಾತ್ಮ ಅರಣ್ಯ ಇಲಾಖೆಯ ಸಿಬ್ಬಂದಿಗಳ ಪರಿಹಾರ ಮೊತ್ತವನ್ನು 50 ಲಕ್ಷ ರೂ.ಗಳಿಗೆ ಹೆಚ್ಚಳ ಮಾಡಲಾಗಿದೆ. ಮೊದಲು ಹುತಾತ್ಮ ಅರಣ್ಯ ಸಿಬ್ಬಂದಿಗೆ 20 ಲಕ್ಷ ರೂ. ನೀಡಲಾಗುತ್ತಿತ್ತು. ಯಡಿಯೂರಪ್ಪ ಅವರು 30 ಲಕ್ಷ ರೂ.ಗೆ ಏರಿಸಿದ್ದರು. ಇದೀಗ 50 ಲಕ್ಷ ರೂ. ಪರಿಹಾರ ನೀಡಲಾಗುವುದು ಎಂದು ಹೇಳಿದ್ದಾರೆ.
BIG NEWS: ಲಕ್ನೋ ಹೋಟೆಲ್ ಅಗ್ನಿ ದುರಂತ: 15 ಅಧಿಕಾರಿಗಳನ್ನು ಅಮಾನತುಗೊಳಿಸಿದ ಸಿಎಂ ಯೋಗಿ ಆದಿತ್ಯನಾಥ್