ಬೆಂಗಳೂರು : ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಸ್ಥಾಪನೆ ಮಾಡಲು ರಾಜ್ಯ ಸರ್ಕಾರ ತೀರ್ಮಾನಿಸಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಿಸಿದ್ದಾರೆ.
ವಿಧಾನಸೌಧದ ಬ್ಯಾಂಕ್ವೆಟ್ ಹಾಲ್ ನಲ್ಲಿ ನಡೆದ ರಾಷ್ಟ್ರೀಯ ವೈದ್ಯರ ದಿನಾಚರಣೆಯಲ್ಲಿ ಮಾತನಾಡಿದ ಅವರು, 100 ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರಿಸಿ, 100 ಹೊಸ ಆರೋಗ್ಯ ಕೇಂದ್ರಗಳನ್ನು ತೆರೆಯಲಾಗುವುದು, ಬಾಕಿ ಇರುವ 9 ಜಿಲ್ಲೆಗಳಲ್ಲಿ ವೈದ್ಯಕೀಯ ಕಾಲೇಜು ಪ್ರಾರಂಭಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
ಇನ್ನು ರಾಜ್ಯ, ಕೇಂದ್ರ ಸರ್ಕಾರಗಳು ಜಾರಿಗೆ ತಂದಿರುವ ಆಯುಷ್ಮಾನ್ ಭಾರತ್ ವಿಮೆ ಯಶಸ್ವಿ ಯೋಜನೆಯಾಗಿದೆ. ಸ್ವಚ್ಛ ಭಾರತದಿಂದ ಸ್ವಾಸ್ಥ್ಯ ಭಾರತ ನಿರ್ಮಾಣವಾಗುತ್ತದೆ. ಮುಂದಿನ 5 ವರ್ಷಗಳಲ್ಲಿ ರಾಜ್ಯ ಇಡೀ ಏಷ್ಯಾದಲ್ಲಿ ಆರೋಗ್ಯ ಕ್ಷೇತ್ರದಲ್ಲಿ ಮುಂಚೂಣಿಯಲ್ಲಿರುವ ರಾಜ್ಯ ಆಗಲಿದೆ ಎಂದರು.