ಚಿತ್ರದುರ್ಗ : ಮೇದಾರ ಕುಲಗುರುಗಳ ಹೆಸರಿನಲ್ಲಿ ರಾಜ್ಯ ಸರ್ಕಾರ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪನೆ ಮಾಡಲಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ಚಿತ್ರದುರ್ಗದ ಮೇದಾರ ಕೇತೇಶ್ವರ ಗುರುಪೀಠದಲ್ಲಿ ಆಯೋಜಿಸಿದ್ದ ಅಖಿಲ ಕರ್ನಾಟಕ ಮೇದಾರ ಬುಡಕಟ್ಟು ಜನಾಂಗದ ಬೃಹತ್ ಸಮಾವೇಶ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಮೇದಾರ ಸಮುದಾಯದ ವೃತ್ತಿಗೆ ಬೆಂಬಲ ನೀಡುವ ದೃಷ್ಟಿಯಿಂದ ಮೇದಾರ ಕುಲಗುರುಗಳ ಹೆಸರಿನಲ್ಲಿ ರಾಜ್ಯ ಸರ್ಕಾರ ಪ್ರತ್ಯೇಕ ಅಭಿವೃದ್ಧಿ ನಿಗಮ ಸ್ಥಾಪಿಸಲಿದೆ. ಸಮುದಾಯ ನಿಗದಿಪಡಿಸಿದ ದಿನದಂದು ಮೇದಾರ ಕೇತೇಶ್ವರ ಜಯಂತಿ ಘೋಷಿಸಲಾಗುವುದು ಎಂದು ಹೇಳಿದ್ದಾರೆ.
ಮೇದಾರ ವೃತ್ತಿಪರತೆ ತರಲು ಆಧುನಿಕ ತಂತ್ರಜ್ಞಾನ ಅಳವಡಿಸಿ, ಎಲ್ಲರಿಗೂ ತರಬೇತಿ ನೀಡಲಾಗುವುದು. ಹೊಸಹೊಸ ವಸ್ತುಗಳ ತಯಾರಿಕಾ ಕೇಂದ್ರಗಳನ್ನು ತೆರೆದು ಅಲ್ಲಿನ ಉತ್ಪನ್ನಗಳನ್ನು ಸ್ಥಳೀಯ ಮಾರುಕಟ್ಟೆಗೆ ಡಿಜಿಟಲ್ ಮಾರುಕಟ್ಟೆ ವೇದಿಕೆಗಳ ಮೂಲಕ ಅಂತಾರಾಷ್ಟ್ರೀಯ ಮಾರುಕಟ್ಟೆಗೆ ಜೋಡಿಸಲಿದ್ದೇವೆ ಎಂದು ತಿಳಿಸಿದ್ದಾರೆ.