ಕಲಬುರಗಿ : ನಮ್ಮ ಸರ್ಕಾರ ರೈತರ ಪರ ಸರ್ಕಾರವಾಗಿದ್ದು, ರೈತರಿಗಾಗಿ ಹತ್ತಾರು ಯೋಜನೆಗಳನ್ನು ಜಾರಿಗೊಳಿಸಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ನುಡಿದರು.
BIGG NEWS : ಮುಂದಿನ ಶೈಕ್ಷಣಿಕ ವರ್ಷದಿಂದ ಶಾಲೆಗಳಲ್ಲಿ ಯೋಗ ಮತ್ತು ಧ್ಯಾನ ಕಡ್ಡಾಯ ಜಾರಿ : ಸಿಎಂ ಬಸವರಾಜ ಬೊಮ್ಮಾಯಿ
ಸೋಮವಾರ ಸೇಡಂ ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ, ಬೆಂಗಳೂರು ಹಾಗೂ ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮತ ನೇತೃತ್ವದಲ್ಲಿ ಸೇಡಂ ಪಟ್ಟಣದಲ್ಲಿ ಅಯೋಜಿಸಿದ್ದ 69ನೇ ಅಖಿಲ ಭಾರತ ಸಹಕಾರ ಸಪ್ತಾಹ-2022 ವನ್ನು ಉದ್ಘಾಟಿಸಿ ಅವರು ಮಾತನಾಡಿದ ಅವರು. ರೈತರ ಮಕ್ಕಳಿಗೆ ನೀಡುವ ವಿದ್ಯಾನಿಧಿ ಯೋಜನೆ ಮಹತ್ವದ್ದು. ನಾನು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಕೇವಲ 4 ಗಂಟೆಯಲ್ಲಿ ಜಾರಿಗೆ ತಂದೆನು ಎಂದು ಹೇಳಿದ ಅವರು ವಿದ್ಯಾನಿಧಿಯಿಂದ ರೈತರ ಮಕ್ಕಳು ಉನ್ನತ ವ್ಯಾಸಂಗಕ್ಕೆ ಅನುಕೂಲವಾಗಿದೆ ಎಂದು ಹೇಳಿದರು.
ರಾಜ್ಯದ 32 ಲಕ್ಷ ರೈತರಿಗೆ 24 ಸಾವಿರ ಕೋಟಿ ರೂಪಾಯಿ ಸಾಲ ವಿತರಿಸುವ ಗುರಿ ಹೊಂದಲಾಗಿದೆ ಎಂದು ಅವರು ಹೇಳಿದರು. 45 ಕೋಟಿ ರೂಪಾಯಿ ವೆಚ್ಚದಲ್ಲಿ ರಾಜ್ಯದ ಎಲ್ಲಾ ಸಹಕಾರ ಬ್ಯಾಂಕ್ ಗಳನ್ನು ಡಿಜಿಟಲೀಕರಣಗೊಳಿಸಲಾಗುತ್ತಿದೆ. ಈ ಮೂಲಕ ಎಲ್ಲಾ ಸಹಕಾರ ಬ್ಯಾಂಕ್ಗಳಲ್ಲಿ ರೈತರ ಖಾತೆಗೆ ನೇರವಾಗಿ ಹಣ ತಲುಪಲಿದೆ ಎಂದು ಅವರು ಹೇಳಿದರು.
ಮುಂದಿನ ದಿನಗಳಲ್ಲಿ ಸಹಕಾರ ರಂಗ ಇತರ ರಂಗಗಳಿಗಿಂತ ಮಂಚೂಣಿಯಲ್ಲಿರಬೇಕು. ಅದು ಸರ್ವ ಸ್ಪರ್ಶಿ-ಸರ್ವ ವ್ಯಾಪಿಯಾಗಬೇಕು ಎಂದು ಅವರು ಆಶಿಸಿದರು.
ಯಶಸ್ವಿನಿ ಯೋಜನೆ ಬಡವರಿಗೆ ಅನುಕೂಲಕರ ಯೋಜನೆಯಾಗಿದ್ದು, ಮತ್ತೆ ಈ ಯೋಜನೆ ಜಾರಿ ಮಾಡಬೇಕೆಂದು ಬಡಜನತೆ ಒತ್ತಾಯಿಸಿದ್ದರಿಂದ ರಾಜ್ಯ ಬಜೆಟ್ನಲ್ಲಿ 300 ಕೋಟಿ ರೂಪಾಯಿ ಮೀಸರಿಸಲಾಗಿದೆ. ಬಡವರಿಗೆ ಹೃದ್ರೋಗ, ಕಿಡ್ನಿ, ಕರಳು ಬೇನೆ, ಕ್ಯಾನ್ಸರ್ ಮುಂತಾದ ರೋಗಗಳಿಗೆ ಆಸ್ಪತ್ರೆಗಳಲ್ಲಿ ನೇರವಾಗಿ ಚಿಕಿತ್ಸೆ ದೊರೆಯಲಿದೆ ಎಂದು ಯಶಸ್ವಿನಿ ಯೋಜನೆಯ ಮಹತ್ವ ಹೇಳಿದರು.
ಮುಚ್ಚುವ ಸ್ಥಿತಿಯಲ್ಲಿದ್ದ ಕಲಬುರಗಿ-ಯಾದಗಿರಿ ಜಿಲ್ಲಾ ಸಹಕಾರ ಬ್ಯಾಂಕನ್ನು ಮೇಲೆತ್ತಿ 1012 ಕೋಟಿ ರೂಪಾಯಿ ಸಾಲ ನೀಡುವ ಮೂಲಕ ಸುಸ್ಥಿತಿಗೆ ತಂದಿದ್ದಾರೆ ಎಂದು ಹೇಳುವ ಮೂಲಕ ಕಲಬುರಗಿ-ಯಾದಗಿರಿ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ನಿಯಮಿತದ ಅಧ್ಯಕ್ಷ ರಾಜಕುಮಾರ್ ಪಾಟೀಲ್ ತೇಲ್ಕೂರ ಅವರನ್ನು ಮುಖ್ಯಮಂತ್ರಿಗಳು ಹಾಡಿಹೊಗಳಿದರು.
ಕಾಗಿಣಾ ಏತ ನೀರಾವರಿ ಯೋಜನೆಗೆ ಸರ್ಕಾರ ಮಂಜೂರಾತಿ ನೀಡಿದ್ದು, ಸದ್ಯದಲ್ಲೇ ನಾನೇ ಈ ಯೋಜನೆಗೆ ಚಾಲನೆ ನೀಡಲಿದ್ದೇನೆ ಎಂದು ಅವರು ಹೇಳಿದರು.
ಸಹಕಾರ ತತ್ವದ ಏಳು ತತ್ವಗಳನ್ನು ಸಾರುವ ಏಳು ಬಣ್ಣಗಳ ಒಳಗೊಂಡ ಸಹಕಾರ ಧ್ವಜಾರೋಹಣ ನೆರವೇರಿಸಿದ ಕೇಂದ್ರ ನವೀಕರಿಸಬಹುದಾದ ಇಂಧನ ಮೂಲ, ರಾಸಾಯನಿಕ ಮತ್ತು ರಸಗೊಬ್ಬರ ಸಚಿವ ಭಗವಂತ ಖೂಬಾ ಅವರು ಮಾತನಾಡಿ, ಡಿಸಿಸಿ ಬ್ಯಾಂಕ್, ಅಪೆಕ್ಸ್ ಬ್ಯಾಂಕ್, ನಬಾರ್ಡ್ಗಳ ಮೂಲಕ ರೈತರಿಗೆ ಸಾಲ ಸೌಲಭ್ಯ ಹೆಚ್ಚಳ ಮಾಡಲಾಗಿದೆ ಎಂದು ಹೇಳಿದರು. ಸಹಕಾರ ರಂಗ ಬಲವರ್ಧನೆ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಸಹಕಾರ ಖಾತೆಯನ್ನು ಸೃಷ್ಠಿಸಿದ್ದು, ಇದರ ಹೊಣೆಯನ್ನು ಅಮಿತ್ ಶಾ ಅವರು ಹೊತ್ತಿದ್ದಾರೆ ಎಂದು ಗುಣಗಾನ ಮಾಡಿದರು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಮುರುಗೇಶ್ ನಿರಾಣಿ ಅವರು ಮಾತನಾಡಿ, ಸಹಕಾರ ರಂಗದಲ್ಲಿ ಮಹಾರಾಷ್ಟ್ರ ಮುಂಚೂಣಿಯಲ್ಲಿದೆ. ಕರ್ನಾಟಕ ಸರ್ಕಾರ ಈಗ ಮುಂಚೂಣಿಗೆ ಬರುತ್ತಿದೆ ಎಂದು ಹೇಳಿದರು.