ಕಲಬುರಗಿ : ಕಲ್ಯಾಣ ಕರ್ನಾಟಕ ಅಭಿವೃದ್ದಿ ಮಂಡಳಿಗೆ 5,000 ಕೋಟಿ ರೂ. ನೀಡುವುದಾಗಿ ಹೇಳಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಮೂಗಿಗೆ ತುಪ್ಪ ಸವರಿ ಹೋಗಿದ್ದಾರೆ ಸಿಎಂ ಬಸವರಾಜ ಬೊಮ್ಮಾಯಿ ವಿರುದ್ಧ ಕಾಂಗ್ರೆಸ್ ಶಾಸಕ ಪ್ರಿಯಾಂಕ್ ಖರ್ಗೆ ವಾಗ್ದಾಳಿ ನಡೆಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕರ್ನಾಟಕದಲ್ಲಿ ಮುಂದೆ ಚುನಾವಣೆ ಬರುತ್ತಿದೆ ಈ ಅನುದಾನ ಬಿಡುಗಡೆ ಅಸಾಧ್ಯಾ. ಘೋಷಿತ ಅನುದಾನವನ್ನೇ ಸರಿಯಾಗಿ ಬಿಡುಗಡೆ ಮಾಡದ ಸಿಎಂ ಮತ್ತೆ 5,000 ಕೋಟಿ ರೂ. ನೀಡುವುದಾಗಿ ಹೇಳಿದ್ದಾರೆ. ಇದನ್ನು ಗಮನಿಸಿದರೆ, ಬೊಮ್ಮಾಯಿ ಅವರು ಮೋದಿಗಿಂತಲೂ ಸುಳ್ಳು ಹೇಳುವುದರಲ್ಲಿ ನಿಸ್ಸೀಮರಾಗಿದ್ದಾರೆ ಟೀಕಿಸಿದ್ದಾರೆ.
BIGG NEWS : `PSI’ ನೇಮಕಾತಿ ಹಗರಣ : ಚಾರ್ಜ್ ಶೀಟ್ ಬಳಿಕ ಮರು ಪರೀಕ್ಷೆ ದಿನಾಂಕ ಘೋಷಣೆ : ಐಜಿಪಿ ಪ್ರವೀಣ್ ಸೂದ್
ಡಬಲ್ ಇಂಜಿನ್ ಸರ್ಕಾರದ ದೋಖಾ ಹಾಗೂ ಬೊಮ್ಮಾಯಿಯವರ ಬಂಡಲ್ನಿಂದಾಗಿ ಕಲ್ಯಾಣ ಕರ್ನಾಟಕ ಹಿನ್ನೆಡೆಯಾಗುತ್ತಿದೆ. ಸಿಎಂ 5 ಸಾವಿರ ಕೋಟಿ ರೂ. ಕೊಡುತ್ತೇನೆ ಅಂತಾ ಹೇಳಿದ್ದೆ ತಡ. ಬಿಜೆಪಿ ಶಾಸಕರಿಗೆ ಜೊಲ್ಲು ಸುರಿಯಲು ಆರಂಭವಾಗಿದೆ. 40 % ಕಮಿಷನ್ ಹೊಡೆಯಬಹುದೆಂದು ಜೊಲ್ಲು ಸುರಿಸಲು ಆರಂಭ ಮಾಡಿದ್ದಾರೆ. ಸಿಎಂ ಬೊಮ್ಮಾಯಿ ನಿನ್ನೆ ಕಲ್ಯಾಣ ಕರ್ನಾಟಕ ಉತ್ಸವದಲ್ಲಿ ಯಾರೋ ಕೊಟ್ಟ ಉದ್ರಿ ಭಾಷಣ ಮಾಡಿ ಹೋಗಿದ್ದಾರೆ ಕಿಡಿಕಾರಿದ್ದಾರೆ.