ಬೆಂಗಳೂರು : ಗ್ರಾಮಪಂಚಾಯಿತಿಗಳ ಅಧ್ಯಕ್ಷರ ಅಧಿಕಾರ ಮೊಟಕುಗೊಳಿಸಿ ಪಿಡಿಒಗಳಿಗೆ ನೀಡುವ ಪ್ರಸ್ತಾವನೆಗೆ ಸಿಎಂ ಬಸವರಾಜ ಬೊಮ್ಮಾಯಿ ತಿರಸ್ಕರಿಸಿದ್ದಾರೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ತಿಳಿಸಿದ್ದಾರೆ.
BIGG NEWS : ನಾಳೆ ‘ಹಾಸನಾಂಬ ದೇವಾಲಯ’ ಓಪನ್’ : ಅ. 27ರವರೆಗೆ ಭಕ್ತರಿಗೆ ದರ್ಶನಕ್ಕೆ ಅವಕಾಶ | Hasanamba Temple
ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಅರಗಜ್ಞಾನೇಂದ್ರ, ಪಂಚಾಯಿತಿಗಳ ಅಧ್ಯಕ್ಷರು, ಉಪಾಧ್ಯಕ್ಷರುಉ ಹಾಗೂ ಸದಸ್ಯರಿಗೆ ಪ್ರಸ್ತುತ ಇರುವ ಯಾವುದೇ ಅಧಿಕಾರವನ್ನು ಕಡಿತಗೊಳಿಸುವ ವಿಚಾರ ಸರ್ಕಾರದ ಮುಂದೆ ಇಲ್ಲ.ಪಂಚಾಯಿತಿ ಸಂಸ್ಥೆಗಳು, ಪ್ರಜಾಪ್ರಭುತ್ವ ವ್ಯವಸ್ಥೆಯ ಭದ್ರ ಬುನಾದಿಯಾಗಿದ್ದು, ಗ್ರಾಮೀಣ ಭಾಗದಲ್ಲಿ ಭವಿಷ್ಯದ ನಾಯಕತ್ವ ರೂಪಿಸುವಲ್ಲಿ ಗಣನೀಯ ಕೊಡುಗೆ ಸಲ್ಲಿಸುತ್ತಿವೆ ಎಂದು ಸಿಎಂ ಬೊಮ್ಮಾಯಿ ತಿಳಿಸಿದ್ದಾರೆ ಎಂದು ಹೇಳಿದ್ದಾರೆ.
ಕರ್ನಾಟಕ ಗ್ರಾಮ ಸ್ವರಾಜ್ ಮತ್ತು ಪಂಚಾಯಿತಿ ರಾಜ್ ಅಧಿನಿಯಮ 1993 ಕ್ಕೆ ತಿದ್ದುಪಡಿ ತಂದು ಪಂಚಾಯಿತಿ ಚುನಾಯಿತ ಪ್ರತಿನಿಧಿಗಳ ಅಧಿಕಾರ ಮೊಟಕುಗೊಳಿಸಲು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯಿತಿ ರಾಜ್ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಅಧ್ಯಕ್ಷತೆಯ ಸಭೆ ತೀರ್ಮಾನ ಕೈಗೊಂಡಿತ್ತು.