ಬೆಳಗಾವಿ : ಇಂದು ಸುವರ್ಣಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ತುರ್ತು ಸಚಿವ ಸಂಪುಟ ಸಭೆ ನಡೆಯಲಿದ್ದು, ಪಂಚಮಸಾಲಿ ಮತ್ತು ಒಕ್ಕಲಿಗರ ಮೀಸಲಾತಿ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.
ಇಂದು ಬೆಳಗ್ಗೆ 10.30ಕ್ಕೆ ಸುವರ್ಣಸೌಧದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಡೆಯಲಿದ್ದು, ಪಂಚಮಸಾಲಿ ಹಾಗೂ ಒಕ್ಕಲಿಗ ಸಮುದಾಯಕ್ಕೆ ಪ್ರತ್ಯೇಕ ಪ್ರವರ್ಗ ರಚಿಸಿ ಮೀಸಲಾತಿ ನೀಡುವ ಸಂಬಂಧ ಚರ್ಚೆ ನಡೆಯುವ ಸಾಧ್ಯತೆ ಇದೆ.
ಇನ್ನು ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿ ಹೆಚ್ಚಳವಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಕೈಗೊಳ್ಳಬೇಕಾದ ಮುನ್ನೆಚ್ಚರಿಕಾ ಕ್ರಮಗಳ ಬಗ್ಗೆಯೂ ಚರ್ಚೆ ನಡೆಯುವ ಸಾಧ್ಯತೆ ಇದೆ ಎನ್ನಲಾಗಿದೆ.
3ಎ ಅಡಿಯಲ್ಲಿ ಒಕ್ಕಲಿಗ, ರೆಡ್ಡಿ, ಬಲಿಜ, ಬಂಟ, ಕೊಡವ ಸೇರಿ 12 ಜಾತಿಗಳಿವೆ. 3ಬಿ ಅಡಿಯಲ್ಲಿ ವೀರಶೈವ ಮತ್ತು ಲಿಂಗಾಯತ ಸಮುದಾಯಗಳು ಮತ್ತು ಉಪಜಾತಿಗಳನ್ನು ಶಿಫ್ಟ್ ಮಾಡುವ ಚಿಂತನೆ ನಡೆಯುತ್ತಿದೆ. ಇಡಬ್ಲ್ಯುಎಸ್ ಅಡಿ ರಾಜ್ಯಗಳಿಗೆ ಇರುವ ಅಧಿಕಾರ ಚಲಾಯಿಸಿ, ಪಂಚಸಾಲಿಗಳಿಗೆ ಶೇ4 ರಷ್ಟು ಮತ್ತು ಒಕ್ಕಲಿಗರಿಗೆ ಶೇ.3 ರಷ್ಟು ಮೀಸಲು ಮರು ಹಂಚಿಕೆ ಮಾಡುವ ಸಾಧ್ಯತೆ ಇದೆ.
ಅಮೃತಸರದ ರಜತಲ್ ಗ್ರಾಮದ ಬಳಿ ಡ್ರೋನ್ ಪತ್ತೆ ಹಚ್ಚಿದ ಬಿಎಸ್ಎಫ್ ಸಿಬ್ಬಂದಿ