ಬೆಂಗಳೂರು : ರಾಜ್ಯದಲ್ಲಿ ಮತ್ತೆ ಮಳೆಯ ಆರ್ಭಟ ಮುಂದುವರೆದಿದ್ದು, ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಯಾಗಿದ್ದು, ಈ ಬಗ್ಗೆ ಪರಿಹಾರ ಕ್ರಮ ಕೈಗೊಳ್ಳುವ ಸಂಬಂಧ ಇಂದು ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಸಭೆ ಕರೆದಿದ್ದಾರೆ.
ಇಂದು ಸಿಎಂ ಬಸವರಾಜ ಬೊಮ್ಮಾಯಿ ಅವರು ಮಂಕಿಪಾಕ್ಸ್ ಬಗ್ಗೆ ತೆಗೆದುಕೊಳ್ಳಬೇಕಾಗಿರುವ ಕ್ರಮಗಳ ಕುರಿತು ಆರೋಗ್ಯ ಇಲಾಖೆಯೊಂದಿಗೆ ಸಭೆ ನಡೆಸಲಿದ್ದಾರೆ. ರಾಜ್ಯದಲ್ಲಿ ಮಂಕಿಪಾಕ್ಸ್ ಸೋಂಕು ಹರಡದಂತೆ ತಡೆಯುವ ಉದ್ದೇಶದಿಂದ ಅಗತ್ಯ ಪೂರ್ವ ಸಿದ್ಧತೆಗಳನ್ನು ಕೈಗೊಳ್ಳುವ ಹಿನ್ನಲೆಯಲ್ಲಿ ಮಂಗಳವಾರ ಮಹತ್ವದ ಸಭೆ ಕರೆಯಲಾಗಿದೆ ಎಂದು ಹೇಳಿದ್ದಾರೆ.
ಮಂಕಿಪಾಕ್ಸ್ ಸೋಂಕು ತಡೆಯುವ ಕುರಿತಂತೆ ಹೊರ ರಾಜ್ಯದಿಂದ ಬರುವ ಪ್ರಯಾಣಿಕರನ್ನು ಪರೀಕ್ಷೆ ಮಾಡಲಾಗುತ್ತಿದೆ. ಮಂಕಿಪಾಕ್ಸ್ ಕುರಿತಂತೆ ಕೆಲವು ನಿರ್ದೇಶನಗಳನ್ನು ಜಾರಿ ಮಾಡಲು ಹಾಗೂ ಪ್ರಯೋಗಾಲಯ ಸಿದ್ಧತೆ ಕುರಿತಂತೆ ಇಂದು ಬೆಂಗಳೂರಿನಲ್ಲಿ ಆರೋಗ್ಯ ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಮಹತ್ವದ ಸಭೆ ಕರೆಯಲಾಗಿದ್ದು ಅಗತ್ಯ ನಿರ್ಣಯಗಳನ್ನು ಕೈಗೊಳ್ಳಲಾಗುವುದು ಎಂದರು.
Big news: ಶಸ್ತ್ರಚಿಕಿತ್ಸೆಯಿಲ್ಲದೇ ವ್ಯಕ್ತಿಯ ಹೊಟ್ಟೆಯಿಂದ 50 ಕ್ಕೂ ಹೆಚ್ಚು ನಾಣ್ಯಗಳನ್ನು ಹೊರತೆಗೆದ ವೈದ್ಯರು!