ಬೆಂಗಳೂರು : ರಾಜ್ಯದ ಕಲಬುರಗಿ, ಯಾದಗರಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ ಜಿಲ್ಲೆ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳಿಗಾಗಿಯೇ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸಲು ರಾಜ್ಯ ಸರ್ಕಾರ ಮುಂದಾಗಿದೆ.
ಮಾನಸಿಕ ಅಸ್ವಸ್ಥ ಮಗಳ ಮೇಲೆ ಅತ್ಯಾಚಾರ ಎಸಗಿದ ಪಾಪಿ ತಂದೆಗೆ ‘107 ವರ್ಷ ಜೈಲು ಶಿಕ್ಷೆ’ ವಿಧಿಸಿದ ಕೋರ್ಟ್
ಈ ಹಿಂದೆ ರಾಜ್ಯ ವಕ್ಫ್ ಬೋರ್ಡ್ ಮುಸ್ಲಿಂ ಹೆಣ್ಣುಮಕ್ಕಳಿಗಾಗಿಯೇ ಪ್ರತ್ಯೇಕ 10 ಕಾಲೇಜುಗಳನ್ನು ಸ್ಥಾಪಿಸುವ ನಿರ್ಣಯ ಕೈಗೊಳ್ಳಲಾಗಿತ್ತು. ಒಂದೂವರೆ ತಿಂಗಳ ಹಿಂದೆ ಸರ್ಕಾರದಿಂದ ಇದಕ್ಕೆ ಅನುಮೋದನೆಯೂ ಸಿಕ್ಕಿತ್ತು. ಪ್ರತಿ ಕಾಲೇಜಿಗೆ 2.5 ಕೋಟಿ ರೂ. ಅನುದಾನವನ್ನೂ ಮೀಸಲಿರಿಸಲಾಗಿದೆ. ಸಿಎಂ ಬಸವರಾಜ ಬೊಮ್ಮಾಯಿ ಅವರು ಮುಂದಿನ ತಿಂಗಳು ಈ ಯೋಜನೆಗೆ ಶಂಕುಸ್ಥಾಪನೆ ನೆರವೇರಿಸುವ ಸಾಧ್ಯತೆ ಇದೆ.
ಉಡುಪಿಯಲ್ಲಿ ಹಿಜಾಬ್ ವಿವಾದದ ಬಳಿಕ ತರಗತಿಯಲ್ಲಿ ಹಿಜಾಬ್ ಧರಿಸದಂತೆ ಸರ್ಕಾರ ಆದೇಶ ಹೊರಡಿಸಿತ್ತು. ಈ ವಿಚಾರ ನ್ಯಾಯಾಲಯದ ಮೆಟ್ಟಿಲೇರಿತ್ತು. ಈ ವಿಷಯವಾಗಿ ಬಹುತೇಕ ಮುಸ್ಲಿಂ ಸಂಘ ಸಂಸ್ಥೆಗಳ ವಿರುದ್ಧ ತಿರುಗಿಬಿದ್ದಿದ್ದವು. ಇದೀಗ ಚುನಾವಣೆ ಸಂದರ್ಭದಲ್ಲಿ ಸರ್ಕಾರವೇ ಕಾಲೇಜು ಸ್ಥಾಪನೆಗೆ ಮುಂದಾಗಿದೆ.
ರಾಜ್ಯದ ದಕ್ಷಿಣ ಕನ್ನಡ ಜಿಲ್ಲೆಯ ಕಣ್ಣೂರು, ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಕಲಬುರಗಿ, ಯಾದಗರಿ, ರಾಯಚೂರು, ಉಡುಪಿ ಜಿಲ್ಲೆ ಸೇರಿದಂತೆ 10 ಕಡೆಗಳಲ್ಲಿ ಮುಸ್ಲಿಂ ಹೆಣ್ಣುಮಕ್ಕಳ ಕಾಲೇಜು ಆರಂಭಿಸಲಾಗುತ್ತದೆ.