ಬೆಂಗಳೂರು : ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನವೆಂಬರ್ 29 ರಂದು ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ತೀವ್ರ ಕೂತುಹಲಕ್ಕೆ ಕಾರಣವಾಗಿದ್ದು, ಸಚಿವ ಸಂಪುಟ ವಿಸ್ತರಣೆಗೆ ಹೈಕಮಾಂಡ್ ಒಪ್ಪಿಗೆ ಪಡೆದುಕೊಂಡು ಬರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.
ನವೆಂಬರ್ 29 ರಂದು ಸಿಎಂ ಬೊಮ್ಮಾಯಿ ದೆಹಲಿಗೆ ತೆರಳಲಿದ್ದು, ವರಿಷ್ಠರನ್ನು ಭೇಟಿಯಾಗಿ ರಾಜ್ಯ ರಾಜಕಾರಣದ ವಿದ್ಯಾಮಾನಗಳ ಬಗ್ಗೆ ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದ್ದು, ಜೊತೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಮಾತುಕತೆ ನಡೆಸಲಿದ್ದಾರೆ ಎನ್ನಲಾಗಿದೆ.
ಸಚಿವಾಕಾಂಕ್ಷಿಗಳ ಒತ್ತಡ, ಆಡಳಿತಾತ್ಮಕ ವಿಚಾರಗಳ ಬಗ್ಗೆ ಚರ್ಚೆ ನಡೆಸಲು ಸಿಎಂ ಬಸವರಾಜ ಬೊಮ್ಮಾಯಿ ನವೆಂಬರ್ 29 ರಂದು ದೆಹಲಿಗೆ ತೆರಳಲಿದ್ದಾರೆ. ನವೆಂಬರ್ 29 ರಂದು ಸಿಎಂ ಬೊಮ್ಮಾಯಿ ದೆಹಲಿಗೆ ಪ್ರಯಾಣ ಬೆಳಸಲಿದ್ದು, ದೆಹಲಿಯಲ್ಲಿ ಬಿಜೆಪಿ ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಅಥವಾ ಸಂಪುಟ ಪುನಾಚರಣೆ ಕುರಿತು ಚರ್ಚೆ ನಡೆಸಲಿದ್ದಾರೆ ಎನ್ನಲಾಗಿದೆ.
BREAKING NEWS: ನಮಗೆ ನೀರು ಕೊಡಿ ಇಲ್ಲವಾದ್ರೆ ಕರ್ನಾಟಕಕ್ಕೆ ಹೋಗ್ತೇವೆ; ಉಮದಿ ಗ್ರಾಮದ ಜನರ ಆಕ್ರೋಶ
ಇನ್ನು ಸಿಎಂ ಬಸವರಾಜ ಬೊಮ್ಮಾಯಿ ಅವರು ದೆಹಲಿ ಭೇಟಿ ನಿಗದಿಯಾದ ಹಿನ್ನೆಲೆಯಲ್ಲಿ ಸಚಿವ ಸ್ಥಾನದ ಆಕಾಂಕ್ಷಿಗಳು ಮತ್ತೆ ಲಾಭಿ ಮುಂದುವರೆಸಿದ್ದಾರೆ. ಮಾಜಿ ಸಚಿವರಾದ ರಮೇಶ್ ಜಾರಕಿಹೊಳಿ, ಸಿ.ಪಿ. ಯೋಗೇಶ್ವರ್, ಕೆ.ಎಸ್.ಈಶ್ವರಪ್ಪ ಅವರು ಸಚಿವ ಸ್ಥಾನಕ್ಕೆ ಒತ್ತಾಯಿಸುತ್ತಿದ್ದಾರೆ ಎನ್ನಲಾಗಿದೆ.