ಬೆಂಗಳೂರು : ಸಿಎಂ ಬಸವರಾಜ ಬೊಮ್ಮಾಯಿ (CM Basavaraja Bommai) ಅವರು ಡಿಸೆಂಬರ್ 25 ರ ಸೋಮವಾರ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ಹೈಕಮಾಂಡ್ ನಿಂದ ಸಚಿವ ಸಂಪುಟ ವಿಸ್ತರಣೆಗೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ ಎನ್ನಲಾಗಿದೆ.
BREAKING NEWS : ನಾನು ಈಗಲೂ ಬಿಜೆಪಿಯಲ್ಲೇ ಮುಂದುವರೆಯುತ್ತೇನೆ : ಮಾಜಿ ಸಚಿವ ಜನಾರ್ದನ ರೆಡ್ಡಿ ಸ್ಪಷ್ಟನೆ
ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಈಗಾಗಲೇ ಸಿದ್ಧತೆ ನಡೆಸಿದ್ದಾರೆ ಎನ್ನಲಾಗಿದ್ದು, ನಾಳೆ ದೆಹಲಿ ಪ್ರವಾಸ ಕೈಗೊಳ್ಳಲಿದ್ದು, ವರಿಷ್ಠರನ್ನು ಭೇಟಿಯಾಗಿ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಚರ್ಚೆ ನಡೆಸಲಿದ್ದಾರೆ. ಮೂರು ಪ್ರತ್ಯೇಕ ಪಟ್ಟಿಯನ್ನ ಸಿದ್ಧಪಡಿಸಿಕೊಂಡ ಸಿಎಂ ಬೊಮ್ಮಾಯಿ, ವರಿಷ್ಠರ ಬಳಿ ಮೂರು ಪಟ್ಟಿಗಳ ಬಗ್ಗೆ ಚರ್ಚಿಸಲಿದ್ದಾರೆ ಎಂದು ಹೇಳಲಾಗುತ್ತಿದೆ.
ಗ್ರಾಮೀಣಾಭಿವೃದ್ಧಿ ಸಚಿವ ಸ್ಥಾನಕ್ಕೆ ಕೆ.ಎಸ್. ಈಶ್ವರಪ್ಪ ರಾಜೀನಾಮೆಯಿಂದ ತೆರವಾಗಿರೋ ಒಂದು ಸ್ಥಾನ ಸೇರಿ ಸದ್ಯ ಖಾಲಿಯಿರುವ ಐದು ಸಚಿವ ಸ್ಥಾನಗಳ ಭರ್ತಿ ಮಾಡಲು ಸಿಎಂ ಬೊಮ್ಮಾಯಿ ಲೆಕ್ಕಚಾರ ಹಾಕಿಕೊಂಡಿದ್ದಾರೆ. ಈ ಪಟ್ಟಿಯಲ್ಲಿ ಹೊಸಮುಖಗಳಿಗೆ ಅವಕಾಶ ಕಲ್ಪಿಸುವ ಲೆಕ್ಕಾಚಾರ ಸಿಎಂ ಸಿದ್ದಪಡಿಸಿಕೊಂಡಿದ್ದಾರೆ ಎನ್ನಲಾಗಿದೆ.
ಈ ಭಾರೀ ಸಿಎಂ ಬೊಮ್ಮಾಯಿ ಸಚಿವ ಸಂಫುಟದ ಹೊಸ ಪಟ್ಟಿಯೊಂದಿಗೆ ದೆಹಲಿ ಯಾತ್ರೆ ಆರಂಭಿಸಲಿದ್ದು,ಸಚಿವ ಸಂಪುಟ ವಿಸ್ತರಣೆಗೆ ಬಿಜೆಪಿ ಹೈಕಮಾಂಡ್ ಗ್ರೀನ್ ಸಿಗ್ನಲ್ ಅಸ್ತು ಅನ್ನುತ್ಎ ಅನ್ನೋದೇ ಕುತೂಹಲ ಮೂಡಿಸಿದೆ.