ಬೆಂಗಳೂರು : ರಾಜ್ಯ ಸರ್ಕಾರವು ಕುರಿಗಾಹಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಪ್ರತಿಯೊಬ್ಬ ಕುರಿಗಾರರಿಗೂ 20 ಕುರಿ, ಒಂದು ಮೇಕೆಯನ್ನು ನೀಡಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.

BREAKING NEWS: ಪಶ್ಚಿಮ ನೇಪಾಳದಲ್ಲಿ 6.6 ತೀವ್ರತೆಯ ಪ್ರಬಲ ಭೂಕಂಪ: 3 ಮಂದಿ ಸಾವು | Earthquake in West Nepal

ಹಾವೇರಿ ಜಿಲ್ಲೆಯ ಬ್ಯಾಡಗಿಯಲ್ಲಿ ಬಿಜೆಪಿ ಜನಸಂಕಲ್ಪ ಯಾತ್ರೆ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ರಾಜ್ಯದ ಪ್ರತಿಯೊಬ್ಬ ಕುರಿಗಾರರಿಗೂ 20 ಕುರಿ ಮತ್ತು 1 ಮೇಕೆ ನೀಡಲಾಗುವುದು. ಮುಂದಿನ ತಿಂಗಳಿನಿಂದಲೇ ಈ ಯೋಜನೆ ಜಾರಿಗೆ ತರುತ್ತಿದ್ದೇವೆ. ಇದಕ್ಕಾಗಿ 324 ಕೋಟಿ ರೂ. ಮೀಸಲಿಟ್ಟಿದ್ದೇವೆ ಎಂದು ಹೇಳಿದ್ದಾರೆ.

ಕುರಿಗಾರರ ಕುಟುಂಬ ಸ್ವಾವಲಂಬಿ ಬದುಕು ನಡೆಸಲು ಈ ಯೋಜನೆ ಜಾರಿಗೆ ತರುತ್ತಿದ್ದೇವೆ. ಇದಕ್ಕಾಗಿ 324 ಕೋಟಿ ರೂ. ಮೀಸಲಿಟ್ಟಿದ್ದೇವೆ. ಮುಂದಿನ ತಿಂಗಳಿನಿಂದಲೇ ಈ ಯೋಜನೆ ಜಾರಿಗೆ ಬರಲಿದೆ ಎಂದು ತಿಳಿಸಿದ್ದಾರೆ.

Share.
Exit mobile version