ಬೆಂಗಳೂರು : ರಾಜ್ಯ ಸರ್ಕಾರವು ರಾಜ್ಯದ ಪೌರ ಕಾರ್ಮಿಕರಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, 43 ಸಾವಿರ ಕಾರ್ಮಿಕರ ಖಾಯಂ ಮಾಡಲಾಗುವುದು ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಘೋಷಣೆ ಮಾಡಿದ್ದಾರೆ.
ರಾಜ್ಯದ ನಗರ ಸ್ಥಳೀಯ ಸಂಸ್ಥೆಗಳ ಎಲ್ಲ ಪೌರಕಾರ್ಮಿಕರಿಗೆ ಸಿಎಂ ಬಸವರಾಜ ಬೊಮ್ಮಾಯಿ ಭರ್ಜರಿ ಸಿಹಿಸುದ್ದಿ ನೀಡಿದ್ದು, ಎಲ್ಲ ಪೌರಕಾರ್ಮಿಕರ ಕಾಯಂ ನೇಮಕಾತಿಗೆ ಸೂಕ್ತ ಕ್ರಮ ವ್ಯವಸ್ಥೆ ಕೈಗೊಳ್ಳಲಾಗುವುದು ಎಂದು ಹೇಳಿದ್ದಾರೆ.
BIG NEWS : ಮಹಾರಾಷ್ಟ್ರದ ಮಾಜಿ ಸಿಎಂ ʻಉದ್ದವ್ ಠಾಕ್ರೆʼ ಭೇಟಿ ಮಾಡಿದ ಕೈಗಾರಿಕೋದ್ಯಮಿ ʻಗೌತಮ್ ಅದಾನಿʼ…?
ಈ ಕುರಿತು ಟ್ವೀಟ್ ಮಾಡಿರುವ ಸಿಎಂ ಬಸವರಾಜ ಬೊಮ್ಮಾಯಿ, ಪೌರಕಾರ್ಮಿಕರಿಗೆ ಸಂಬಂಧಿಸಿದಂತೆ ಐಡಿಪಿ ಸಾಲಪ್ಪ ವರದಿ ಅನುಷ್ಠಾನಕ್ಕೆ ರಾಜ್ಯ ಸರ್ಕಾರ ಬದ್ಧವಾಗಿದೆ. ಕಳೆದ ಸಂಪುಟ ಸಭೆಯಲ್ಲಿ 11 ಸಾವಿರ ಪೌರಕಾರ್ಮಿಕರ ಸೇವೆ ಕಾಯಂಗೆ ತೀರ್ಮಾನಿಸಲಾಗಿತ್ತು. ಇನ್ನೂ 43 ಸಾವಿರ ಜನರು ಬಾಕಿ ಇದ್ದು, ಅವರ ಸೇವೆ ಕಾಯಮಾತಿಗೂ ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
"ರಾಜ್ಯದಲ್ಲಿ ಇರುವ ಒಟ್ಟು 43 ಸಾವಿರ ಪೌರ ಕಾರ್ಮಿಕರ ಖಾಯಂ ನೇಮಕಾತಿಗೆ ಸೂಕ್ತ ವ್ಯವಸ್ಥೆ ಕೈಗೊಳ್ಳಲಾಗುವುದು. I.P.D ಸಾಲಪ್ಪ ವರದಿ ಅನುಷ್ಠಾನಕ್ಕೆ ನಮ್ಮ ಸರ್ಕಾರ ಬದ್ಧವಾಗಿದೆ" : ಮುಖ್ಯಮಂತ್ರಿ @BSBommai
— CM of Karnataka (@CMofKarnataka) September 21, 2022