ಚಿತ್ರದುರ್ಗ : ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಹೇಳಿಕೆ ನೀಡಿದ್ದು, ಹೈಕಮಾಂಡ್ ಸಮ್ಮತಿಸಿದರೆ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೈಕಮಾಂಡ್ ಸಮ್ಮತಿಸಿದರೆ ಶೀಘ್ರದಲ್ಲೇ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು. ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಬಂದ ಬಳಿಕ ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.
ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೆ ತರಲಾಗಿದೆ. ಅವರು ಆದಷ್ಟೂ ಬೇಗನೇ ಸಚಿವ ಸಂಪುಟ ವಿಸ್ತರಣೆ ಮಾಡೋಣ ಎಂಬ ಭರವಸೆ ನೀಡಿದ್ದಾರೆ. ವರಿಷ್ಠರು ನನ್ನನ್ನು ಕರೆಸಿ ಮಾತನಾಡಿದರೆ ಆದಷ್ಟು ಬೇಗನೇ ಪ್ರಕ್ರಿಯೆ ಪ್ರಾರಂಭ ಮಾಡಲಾಗುವುದು ಎಂದು ಹೇಳಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಹೇಳಿಕೆಯಿಂದ ಮತ್ತೆ ಸಚಿವ ಸಂಪುಟ ವಿಸ್ತರನೆ ಸರ್ಕಸ್ ಶುರುವಾಗಿದ್ದು, ನವರಾತ್ರಿ ಬಳಿಕ ರಾಜ್ಯ ಸಚಿವ ಸಂಪುಟ ವಿಸ್ತರಣೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಸದ್ಯ ಸಂಪುಟದಲ್ಲಿ ಖಾಲಿ ಇರುವ 6 ಸ್ಥಾನಗಳ ಭರ್ತಿ ಮಾಡುವ ಸಾಧ್ಯತೆ ಇದೆ. ಕೆ.ಎಸ್. ಈಶ್ವರಪ್ಪ, ರಮೇಶ್ ಜಾರಕಿಹೊಳಿ ಸಂಪುಟಕ್ಕೆ ಮರು ಸೇರ್ಪಡೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.