ಬೆಂಗಳೂರು : ಸಚಿವಾ ಸ್ಥಾನದ ಆಕಾಂಕ್ಷಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಲು ವಾರದಲ್ಲಿ ದೆಹಲಿಗೆ ತೆರಳಲು ಸಮಯ ಕೇಳಿದ್ದೇನೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಸಂಪುಟದಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿ ಸಂಬಂಧ ಚರ್ಚಿಸಲು ಹೈಕಮಾಂಡ್ ಭೇಟಿಗೆ ಸಮಯ ಕೇಳಿದ್ದೇನೆ. ಸಮಯ ಕೊಟ್ಟರೆ ಈ ವಾರದೊಳಗೆ ದೆಹಲಿಗೆ ತೆರಳುತ್ತೇನೆ ಎಂದು ತಿಳಿಸಿದ್ದಾರೆ.
ಬಿಜೆಪಿ ಸರ್ಕಾರದಲ್ಲಿ ತೆರವಾಗಿರುವ ಒಟ್ಟು ಆರು ಸ್ಥಾನಗಳನ್ನು ಭರ್ತಿ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿದೆ. ಹೀಗಾಗಿ ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಸಚಿವ ಸ್ಥಾನ ನೀಡುವಂತೆ ಒತ್ತಾಯಿಸಿದ್ದಾರೆ.
BIGG NEWS : ರಾಜ್ಯ ಸರ್ಕಾರಿ ಶಾಲಾ ಶಿಕ್ಷಕರು, ಉಪನ್ಯಾಸಕರಿಗೆ ಇಲ್ಲಿದೆ ಮುಖ್ಯ ಮಾಹಿತಿ