ಬೆಂಗಳೂರು : ರಾಜ್ಯಾದ್ಯಂತ ಇರುವ ಪೌರ ಕಾರ್ಮಿಕರಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ರಾಜ್ಯಾದ್ಯಂತ ಇರುವ ನಗರದ ಪೌರಕಾರ್ಮಿಕರ ಸೇವೆಯನ್ನು ಕಾಯಂಗೊಳಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಭರವಸೆ ನೀಡಿದ್ದಾರೆ.
BIGG NEWS : ರಾಜ್ಯದ ರೈತ ಸಮುದಾಯಕ್ಕೆ ಗುಡ್ ನ್ಯೂಸ್ : ಶೀಘ್ರವೇ `ಡೀಸೆಲ್ ಸಬ್ಸಿಡಿ’ ಖಾತೆಗೆ ಜಮಾ
ಬೆಂಗಳೂರು ಉತ್ತರದ ಕಾನ್ಸಿರಾಂ ನಗರದಲ್ಲಿ ನೂತನವಾಗಿ ನಿರ್ಮಿಸಿರುವ ಬಿ.ಆರ್. ಅಂಬೇಡ್ಕರ್ ಭವನ ಉದ್ಘಾಟಿಸಿ ಮಾತನಾಡಿದ ಅವರು, ರಾಜ್ಯದಲ್ಲಿ ಈಗಾಗಲೇ 11,136 ಪೌರ ಕಾರ್ಮಿಕರಿಗೆ ಖಾಯಂ ನೌಕರಿ ನೀಡಲು ಅಧಿಸೂಚನೆ ಹೊರಡಿಸಿದ್ದೇವೆ. ಉಳಿದವರಿಗೆ ಎರಡು ಮತ್ತು ಮೂರನೇ ಹಂತದಲ್ಲಿ ಕ್ರಮ ಕೈಗೊಳ್ಳಲಿದ್ದೇವೆ ಎಂದು ಹೇಳಿದ್ದಾರೆ.
ಇನ್ನು ಪೌರಕಾರ್ಮಿಕರ ಆಪತ್ತು ನಿಧಿಯನ್ನು 2 ಸಾವಿರಕ್ಕೆ ಹೆಚ್ಚಿಸಲಾಗಿದೆ. ಪೌರಕಾರ್ಮಿಕರನ್ನು ಖಾಯಂಗೊಳಿಸಲು ಸಮಿತಿ ರಚಿಸಿ ಅವರ ಶಿಫಾರಸ್ಸಿನನ್ವಯ ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.