ಬೆಳಗಾವಿ : ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ಸಿಎಂ ಬಸವರಾಜ ಬೊಮ್ಮಾಯಿ ಮಹತ್ವದ ಹೇಳಿಕೆ ನೀಡಿದ್ದು, ವರಿಷ್ಠರನ್ನು ಭೇಟಿಯಾಗಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.
BREAKING NEWS : ಬೆಳಗಾವಿಯಲ್ಲಿ ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ-ರಮೇಶ್ ಜಾರಕಿಹೊಳಿ ರಹಸ್ಯ ಸಭೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸಚಿವ ಸಂಪುಟ ವಿಸ್ತರಣೆ ಸಂಬಂಧ ನನ್ನನ್ನು ಕೆ.ಎಸ್. ಈಶ್ವರಪ್ಪ ಹಾಗೂ ರಮೇಶ್ ಜಾರಕಿಹೊಳಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಸಚಿವ ಸಂಪುಟ ವಿಸ್ತರಣೆ ಕುರಿತಂತೆ ವರಿಷ್ಠರ ಬಳಿ ಈಗಾಗಲೇ ಗಮನಕ್ಕೆ ತಂದಿದ್ದೇನೆ. ಮತ್ತೊಮ್ಮೆ ವರಿಷ್ಠರ ಭೇಟಿಯಾಗಿ ಚರ್ಚೆ ನಡೆಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಈ ನಡುವೆ ಬೆಳಗಾವಿಯ ಖಾಸಗಿ ಹೋಟೆಲ್ ನಲ್ಲಿ ರಮೆಶ್ ಜಾರಿಹೊಳಿ ಮತ್ತು ಕೆ.ಎಸ್. ಈಶ್ವರಪ್ಪ ರಹಸ್ಯ ಮಾತುಕತೆ ನಡೆಸಿದ್ದಾರೆ. ಆದರೆ ಚರ್ಚೆ ಗುಟ್ಟು ಬಿಟ್ಟುಕೊಟ್ಟಿ. ಮಾತುಕತೆ ಬಳಿಕ ಇಬ್ಬರೂ ನಾಯಕರು ಸದನಕ್ಕೆ ಹಾಜರಾಗಿದ್ದಾರೆ.