ಹಾವೇರಿ : ಸಿಎಂ ಬೊಮ್ಮಾಯಿ ಅವರ ತವರು ಕ್ಷೇತ್ರ ಶಿಗ್ಗಾಂವಿಯಲ್ಲಿ ಡಿ. 17 ಮತ್ತು 18 ರಂದು ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮ ನಡೆಯಲಿದ್ದು, ಕಂದಾಯ ಸಚಿವ ಆರ್. ಅಶೋಕ್ ಜೊತೆಗೆ ಸಿಎಂ ಬೊಮ್ಮಾಯಿ ಅವರು ಗ್ರಾಮ ವಾಸ್ತವ್ಯ ಮಾಡುವ ಸಾಧ್ಯತೆ ಇದೆ.
ಡಿಸೆಂಬರ್ 17 ರಂದು ಶಿಗ್ಗಾಂವಿ ತಾಲೂಕಿನ ಬಾಡ ಗ್ರಾಮದ ಮೊರಾರ್ಜಿ ವಸತಿ ಶಾಲೆಯಲ್ಲಿ ಕಂದಾಯ ಸಚಿವ ಆರ್. ಅಶೋಕ್ ಅವರು ವಾಸ್ತವ್ಯ ನಡೆಯಲಿದೆ. ಸಿಎಂ ಬೊಮ್ಮಾಯಿ ಅವರು ಡಿ.17 ಮತ್ತು 18 ರಂದು ಶಿಗ್ಗಾಂವಿ ಕ್ಷೇತ್ರದಲ್ಲಿ ಇರಲಿದ್ದು, ಕಂದಾಯ ಸಚಿವ ಆ.ರ್ ಅಶೋಕ್ ಜೊತೆಗೆ ಗ್ರಾಮವಾಸ್ತವ್ಯ ಮಾಡಬಹುದು ಎನ್ನಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಹಾವೇರಿ ಜಿಲ್ಲಾಧಿಕಾರಿ ರಘುನಂದನಮೂರ್ತಿ, ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಕಂದಾಯ ಸಚಿವರು ಡಿ. 17 ರಂದು ಬಾಡದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಅದಕ್ಕಾಗಿ ಅಗತ್ಯ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ. ಆದರೆ ಸಿಎಂ ಬೊಮ್ಮಾಯಿ ಗ್ರಾಮ ವಾಸ್ತವ್ಯದ ಬಗ್ಗೆ ಇದುವರೆಗೆ ಯಾವುದೇ ಮಾಹಿತಿ ಬಂದಿಲ್ಲ ಎಂದು ತಿಳಿಸಿದ್ದಾರೆ.