ಹಾವೇರಿ : ಇಂದು ಹಾವೇರಿ ಜಿಲ್ಲೆಯ ಶಿಗ್ಗಾಂವಿ ತಾಲೂಕಿನ ಬಾಡಾ ಗ್ರಾಮದಲ್ಲಿ ಕಂದಾಯ ಸಚಿವರ ಗ್ರಾಮ ವಾಸ್ತವ್ಯ ಕಾರ್ಯಕ್ರಮ ನಡೆಯಲಿದ್ದು, ಸಿಎಂ ಬಸವರಾಜ ಬೊಮ್ಮಾಯಿ ಅವರೂ ಗ್ರಾಮ ವಾಸ್ತವ್ಯದಲ್ಲಿ ಪಾಲ್ಗೊಳ್ಳಲಿದ್ದಾರೆ.
ಸಿಎಂ ಬಸವರಾಜ ಬೊಮ್ಮಾಯಿ ಅವರ ತವರು ಕ್ಷೇತ್ರವಾದ ಶಿಗ್ಗಾವಿಯ ಬಾಡ ಗ್ರಾಮದಲ್ಲಿ ಕಂದಾಯ ಸಚಿವ ಆರ್. ಅಶೋಕ್ ಗ್ರಾಮ ವಾಸ್ತವ್ಯ ಕೈಗೊಂಡಿದ್ದಾರೆ. ಕಾರ್ಯಕ್ರಮದಲ್ಲಿ ಸಚಿವ ಆರ್. ಅಶೋಕ್ ಜೊತೆಗೆ ಸಿಎಂ ಬಸವರಾಜ ಬೊಮ್ಮಾಯಿ ಸಹ ಪಾಲ್ಗೊಳ್ಳಲಿದ್ದಾರೆ.
ಕಂದಾಯ ಇಲಾಖೆಯ ಮಹತ್ವಾಕಾಂಕ್ಷಿ ಜಿಲ್ಲಾಧಿಕಾರಿಗಳ ನಡೆ ಹಳ್ಳಿ ಕಡೆ ಕಾರ್ಯಕ್ರಮದ ಅಂಗವಾಗಿ ಕಂದಾಯ ಸಚಿವ ಆರ್. ಅಶೋಕ್ ಅವರು ಪ್ರತಿ ತಿಂಗಳ ಕೊನೆಯ ಶನಿವಾರ ಮತ್ತು ಬಾನುವಾರ ರಾಜ್ಯದ ಯಾವುದಾದರೂ ಒಂದು ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಮಾಡಲಿದ್ದಾರೆ. ಅದರಂತೆ ಈ ಬಾರಿ ಅಶೋಕ್ ಅವರು ಸಿಎಂ ತವರು ಕ್ಷೇತ್ರವಾದ ಶಿಗ್ಗಾವಿಯ ಬಾಡ ಗ್ರಾಮದಲ್ಲಿ ಗ್ರಾಮ ವಾಸ್ತವ್ಯ ಹಮ್ಮಿಕೊಂಡಿದ್ದಾರೆ. ಈ ಕಾರ್ಯಕ್ರಮದಲ್ಲಿ ಸಿಎಂ ಬಸವರಾಜ ಬೊಮ್ಮಯಿ ಸಹ ಪಾಲ್ಗೊಳ್ಳಲಿದ್ದಾರೆ.