ಬೆಳಗಾವಿ : ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ನೀಡುವ ಸಂಬಂಧ ನಾಳೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಐತಿಹಾಸಿಕ ನಿರ್ಧಾರ ಪ್ರಕಟಿಸಲಿದ್ದಾರೆ ಎಂದು ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಸುವರ್ಣಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಂಬಂಧ ಪಂಚಮಸಾಲಿಗಳಿಂದ ನಾಳೆ ಶಕ್ತಿಪ್ರದರ್ಶನವಾಗಲಿದೆ. ಹೀಗಾಗಿ ನಾಳೆ ಸಿಎಂ ಬಸವರಾಜ ಬೊಮ್ಮಾಯಿ ಐತಿಹಾಸಿಕ ನಿರ್ಧಾರ ಮಾಡಲಿದ್ದಾರೆ ಎಂದರು.
ರಾಜ್ಯ ಸರ್ಕಾರದ ಮೇಲೆ ವಿಶ್ವಾಸವಿದೆ. ಸಿಎಂ ಬೊಮ್ಮಾಯಿ ಪಂಚಮಸಾಲಿ ಸಮುದಾಯಕ್ಕೆ ಸಿಹಿಸುದ್ದಿ ನೀಡಲಿದ್ದಾರೆ. ಗುರುವಾರ ಈ ನಿಟ್ಟಿನಲ್ಲಿ ಐತಿಹಾಸಿಕ ಘೋಷಣೆ ಆಗಲಿದೆ. ನಾವು ಯಾರಿಗೂ ಆಹ್ವಾನ ನೀಡುತ್ತಿಲ್ಲ. 25 ಲಕ್ಷ ಜನರು ಬರುತ್ತಾರೆ ಎಂದು ಹೇಳಿದ್ದಾರೆ.