ಬೆಂಗಳೂರು : ರಾಜ್ಯ ಸರ್ಕಾರಿ ನೌಕರರು ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವ ದಿನಾಂಕವನ್ನು ವಿಸ್ತರಣೆ ಮಾಡಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘ ರಾಜ್ಯ ಸರ್ಕಾರಕ್ಕೆ ಪತ್ರದಲ್ಲಿ ಒತ್ತಾಯಿಸಿದ್ದಾರೆ.
ರಾಜ್ಯ ಸರ್ಕಾರಿ ನೌಕರರ ವಾರ್ಷಿಕ ವೇತನ ಬಡ್ತಿ, ಮುಂಬಡ್ತಿ ಇನ್ನಿತರೆ ಸವಲತ್ತುಗಳನ್ನು ಪಡೆಯಲು ನೌಕರರು “ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆ” ಯಲ್ಲಿ ಉತ್ತೀರ್ಣರಾಗುವುದನ್ನು ಕಡ್ಡಾಯಗೊಳಿಸಲಾಗಿದೆ. ಅಂತೆಯೇ, ಉಲ್ಲೇಖಿತ ಅಧಿಸೂಚನೆಯನ್ವಯ ದಿನಾಂಕ: 31-12-2022ರೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಲು ಸಮಯಾವಕಾಶ ನೀಡಲಾಗಿದೆ. ಆದರೆ, ಈ ಕೆಳಕಂಡ ಕಾರಣಗಳಿಂದಾಗಿ ಸುಮಾರು 1.00 ಲಕ್ಷಕ್ಕೂ ಅಧಿಕ ಅಧಿಕಾರಿ-ನೌಕರರು ನಿಗಧಿತ ಅವಧಿಯೊಳಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಲು ಸಾಧ್ಯವಾಗದಿರುವುದನ್ನು ಗಮನಿಸಲಾಗಿದೆ ಹೀಗಾಗಿ ಕಂಪ್ಯೂಟರ್ ಸಾಕ್ಷಾರತಾ ಪರೀಕ್ಷೆ ದಿನಾಂಕವನ್ನು 31-12-2023 ಕ್ಕೆ ವಿಸ್ತರಿಸುವಂತೆ ಪತ್ರದಲ್ಲಿ ಕೋರಲಾಗಿದೆ.