ಬೆಂಗಳೂರು: ತಲೆಗೆ ಗುಂಡು ಹಾರಿಸಿಕೊಂಡು ಪ್ರದೀಪ್ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಡೆತ್ ನೋಟ್ ನಲ್ಲಿ ಪ್ರಬಾವಿ ನಾಯಕ ಹೆಸರು ಇದ್ದು, ಹಣ ಪಡೆದು ವಂಚನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.
BREAKING NEWS: ತಲೆಗೆ ಗುಂಡು ಹಾರಿಸಿಕೊಂಡು ಪ್ರದೀಪ್ ಆತ್ಮಹತ್ಯೆ ಪ್ರಕರಣ; ಶಾಸಕ ಅರವಿಂದ ಲಿಂಬಾಳಿ ವಿರುದ್ಧ FIR
ಈ ಕುರಿತು ಟ್ವೀಟ್ ಮಾಡಿರುವ ರಾಜ್ಯ ಕಾಂಗ್ರೆಸ್, ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪನವರ ರಕ್ಷಣೆ, ಮತ್ತೊಬ್ಬ ಗುತ್ತಿಗೆದಾರ ಪ್ರಸಾದ್ ಆತ್ಮಹತ್ಯೆ ಪ್ರಕರಣದಲ್ಲೂ ಅಧಿಕಾರಿಗಳ ರಕ್ಷಣೆ, ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣದಲ್ಲಿ ಶಾಸಕ ಅರವಿಂದ್ ಲಿಂಬಾವಳಿ ರಕ್ಷಣೆ ಸಿಎಂ ಬಸವರಾಜ ಬೊಮ್ಮಾಯಿ ಅವರು CCM ಆಗಿದ್ದಾರೆ -“ಕ್ರಿಮಿನಲ್ಸ್ ಕೇರ್ಟೇಕರ್ ಮಿನಿಸ್ಟರ್” ಎಂದು ವಾಗ್ದಾಳಿ ನಡೆಸಿದೆ.
◆ಗುತ್ತಿಗೆದಾರ ಸಂತೋಷ್ ಪಾಟೀಲ್ ಆತ್ಮಹತ್ಯೆ ಪ್ರಕರಣದಲ್ಲಿ ಈಶ್ವರಪ್ಪನವರ ರಕ್ಷಣೆ
◆ಮತ್ತೊಬ್ಬ ಗುತ್ತಿಗೆದಾರ ಪ್ರಸಾದ್ ಆತ್ಮಹತ್ಯೆ ಪ್ರಕರಣದಲ್ಲೂ ಅಧಿಕಾರಿಗಳ ರಕ್ಷಣೆ
◆ಉದ್ಯಮಿ ಪ್ರದೀಪ್ ಆತ್ಮಹತ್ಯೆ ಪ್ರಕರಣದಲ್ಲಿ ಶಾಸಕ ಅರವಿಂದ್ ಲಿಂಬಾವಳಿ ರಕ್ಷಣೆ
CM @BSBommai ಅವರು CCM ಆಗಿದ್ದಾರೆ –
"ಕ್ರಿಮಿನಲ್ಸ್ ಕೇರ್ಟೇಕರ್ ಮಿನಿಸ್ಟರ್"— Karnataka Congress (@INCKarnataka) January 2, 2023
ಬೆಂಗಳೂರಿನ ಬೆಳ್ಳಂದೂರು ಬಳಿಯ ಅಂಬಲಿಪುರ ನಿವಾಸಿ ಪ್ರದೀಪ್ ತಲೆಗೆ ಗುಂಡಿಟ್ಟುಕೊಂಡು ಆತ್ಮಹತ್ಯೆ ಮಾಡಿಕೊಂಡವನು. ಇಡೀ ಕುಟುಂಬವೇ ರೆಸಾರ್ಟ್ ಗೆ ಹೊಸ ವರ್ಷ ಆಚರಣೆಗೆ ಅಂತಾ ಬಂದಿದ್ದರು. ಸಂಜೆ ಪತ್ನಿ ಮುಂದಿನ ಕಾರಿನಲ್ಲಿ ಹೋಗುತ್ತಿದ್ದರು. ಹಿಂದೆ ಮತ್ತೊಂದು ಕಾರಿನಲ್ಲಿ ಪ್ರದೀಪ್ ಬರುತ್ತಿದ್ದನು. ಈ ವೇಳೆ ಡೆತ್ ನೋಟ್ ಬರೆದಿಟ್ಟು ಪಿಸ್ತೂಲಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.