ಬೆಂಗಳುರು : ಎಐಸಿಸಿಯಿಂದ ಶಾಸಕ ಜಮೀರ್ ಅಹ್ಮದ್ ಖಾನ್ ಗೆ ಎಚ್ಚರಿಕೆ ಕೊಟ್ಟಿರುವ ಕುರಿತಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಪ್ರತಿಕ್ರಿಯೆ ನೀಡಿದ್ದು, ಜಮೀರ್ ಗೆ ಎಚ್ಚರಿಕೆ ಕೊಟ್ಟಿರುವ ಮಾಹಿತಿ ನನಗೆ ಬಂದಿಲ್ಲ ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಮೀರ್ ಗೆ ಎಚ್ಚರಿಕೆ ಕೊಟ್ಟಿರುವ ಮಾಹಿತಿ ನನಗೆ ಬಂದಿಲ್ಲ. ಮಾಧ್ಯಮಗಳ ಮುಖಾಂತರ ನೋಡಿ ತಿಳಿದುಕೊಂಡಿದ್ದೇನೆ. ಹೈಕಮಾಂಡ್ ಏನೆಲ್ಲಾ ಕ್ರಮ ಕೈಗೊಳ್ಳಬೇಕು ಅದನ್ನು ಕೈಗೊಳ್ಳಲಿದೆ ಎಂದು ಹೇಳಿದ್ದಾರೆ.
Breaking news: ನ್ಯಾಷನಲ್ ಹೆರಾಲ್ಡ್ ಪ್ರಕರಣ: 2ನೇ ಸುತ್ತಿನ ವಿಚಾರಣೆಗಾಗಿ ಇಡಿ ಕಚೇರಿಗೆ ಆಗಮಿಸಿದ ʻಸೋನಿಯಾ ಗಾಂಧಿʼ
ಶಾಸಕ ಜಮೀರ್ ಅಹಮದ್ ಖಾನ್ ಬಹಿರಂಗವಾಗಿ ಕೆಪಿಸಿಸಿ ಅಧ್ಯಕ್ಷರ ವಿರುದ್ಧ ಬಹಿರಂಗ ಹೇಳಿಕೆ ನೀಡಿ ಪಕ್ಷಕ್ಕೆ ತೀವ್ರ ಇರಿಸು ಮುರಿಸು ಉಂಟು ಮಾಡಿದ ಆರೋಪದ ಮೇಲೆ ಶಾಸಕ ಜಮೀರ್ ಅಹಮದ್ ಖಾನ್ಗೆ ಎಐಸಿಸಿ ನೋಟಿಸ್ ನೀಡಿದೆ. ರಾಜ್ಯ ಉಸ್ತುವಾರಿ ಸುರ್ಜೇವಾಲ ಎಚ್ಚರಿಕೆ ಪತ್ರ ನೀಡಿದ್ದು, ಪಕ್ಷದ ಶಿಸ್ತು, ಲಕ್ಷಣ ರೇಖೆ ದಾಟದಂತೆ ಸೂಚಿಸಲಾಗಿದೆ , ಇತ್ತೀಚೆಗಿನ ಹೇಳಿಕೆಯಿಂದ ತಪ್ಪು ಸಂದೇಶ ರವಾನೆಯಾಗಿದೆ ಎಂದು ನೋಟಿಸ್ ನೀಡಲಾಗಿದೆ ಎನ್ನಲಾಗಿದೆ.