ಬೆಂಗಳೂರು : ದಾವಣಗೆರೆಯಲ್ಲಿ ಅಗಸ್ಟ್ 3 ರಂದು ನಡೆಯಲಿರುವ ಸಿದ್ದರಾಮೋತ್ಸವ ಕಾರ್ಯಕ್ರಮಕ್ಕೆ ರಾಹುಲ್ ಗಾಂಧಿ ಅವರು ಚಾಲನೆ ನೀಡಲಿದ್ದಾರೆ ಎಂದು ಸಮಿತಿ ಗೌರವಾಧ್ಯಕ್ಷರು ಆಗಿರುವ ಮಾಜಿ ಸಚಿವ ಆರ್. ವಿ. ದೇಶಪಾಂಡೆ ಅಧಿಕೃತವಾಗಿ ಪ್ರಕಟಿಸಿದ್ದಾರೆ.

BIGG NEWS : ಶಾಲಾ ಮಕ್ಕಳಿಗೆ ಗುಡ್ ನ್ಯೂಸ್ ; ವಿದ್ಯಾರ್ಥಿಗಳ ಹೊರೆ ತಗ್ಗಿಸಲು ಸರ್ಕಾರ ಸಜ್ಜು, ಶನಿವಾರ ‘ಬ್ಯಾಗ್ ಲೆಸ್ ಡೇ’..!

ಸುದ್ದಿಗೋಷ್ಠಿಯಲ್ಲಿ ಈ ಕುರಿತು ಮಾಹಿತಿ ನೀಡಿರುವ ಅವರು, ಸಮಾಜದಲ್ಲಿ ತುಳಿತಕ್ಕೆ ಒಳಗಾದವರ ಧ್ವನಿಯಾಗಿ ಸಿದ್ದರಾಮಯ್ಯ ಕಾರ್ಯನಿರ್ವಹಿಸುತ್ತಿದ್ದು, ನಿಷ್ಕಳಂಕ ರಾಜಕಾರಣಿಯಾಗಿದ್ದಾರೆ. ಅಭಿಮಾನಿಗಳು, ಹೋರಾಟಗಾರರು ಸೇರಿಕೊಂಡು ಈ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ. ಕಾರ್ಯಕ್ರಮಕ್ಕೆ 5 ರಿಂದ 6 ಲಕ್ಷ ಜನರು ಸೇರುವ ನಿರೀಕ್ಷೆ ಎಂದು ತಿಳಿಸಿದ್ದಾರೆ.

BIGG NEWS : ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಮತ್ತೊಂದು ಶಾಕ್ : ಕೋಳಿ ಮೊಟ್ಟೆ ಬೆಲೆಯಲ್ಲಿ ದಿಢೀರ್ ಏರಿಕೆ!

ಮುಂದಿನ ವಿಧಾನಸಭೆ ಚುನಾವಣೆ ಗಮನದಲ್ಲಿಟ್ಟುಕೊಂಡು ಮಾಜಿ ಸಿಎಂ ಸಿದ್ದರಾಮಯ್ಯ ಅಭಿಮಾನಿಗಳು, ಬೆಂಬಲಿಗರು ಆಗಸ್ಟ್ ನಲ್ಲಿ ಸಿದ್ದರಾಮಯ್ಯ ಅವರ 75 ವರ್ಷದ ಹುಟ್ಟುಹಬ್ಬದ ಹಿನ್ನೆಲೆಯಲ್ಲಿ ಒಂದು ತಿಂಗಳ ಕಾಲ ‘ಸಿದ್ಧರಾಮೋತ್ಸವ’ ಕಾರ್ಯಕ್ರಮವನ್ನು ಆಯೋಜಿಸಲು ಯೋಜನೆ ರೂಪಿಸುತ್ತಿದ್ದಾರೆ.

ಆಗಸ್ಟ್ 3ರಂದು ಸಿದ್ದರಾಮಯ್ಯ-75 ಅಭಿನಂದನಾ ಸಮಿತಿಯಿಂದ ದಾವಣಗೆರೆಯಲ್ಲಿ ಬೃಹತ್ ಸಮಾವೇಶ ಆಯೋಜಿಸಲಾಗಿದೆ. ಹಿರಿಯ ಕಾಂಗ್ರೆಸ್ ನಾಯಕರಾದ ಆರ್.ವಿ.ದೇಶಪಾಂಡೆ, ಎಚ್.ಸಿ.ಮಹದೇವಪ್ಪ ಮತ್ತು ಸಿದ್ದರಾಮಯ್ಯ ಅವರ ಆಪ್ತರು ಇದರಲ್ಲಿ ಭಾಗಿಯಾಗಿದ್ದಾರೆ. ದೊಡ್ಡ ಜನಸಮೂಹವನ್ನು ಒಟ್ಟುಗೂಡಿಸುವ ಮೂಲಕ, ಸಮಾವೇಶವು ಸಿದ್ದರಾಮಯ್ಯ ಪರ ಪಾಳಯದಿಂದ ಶಕ್ತಿಯ ಪ್ರದರ್ಶನವಾಗಲಿದೆ. ಈ ಕಾರ್ಯಕ್ರಮದಲ್ಲಿ ಭಾಗವಹಿಸಲು ಕಾಂಗ್ರೆಸ್ ನ ಉನ್ನತ ನಾಯಕರನ್ನು ಆಹ್ವಾನಿಸಲಾಗುತ್ತಿದೆ.

Share.
Exit mobile version