ಶಿವಮೊಗ್ಗ : ಪಿಎಸ್ ಐ ನೇಮಕಾತಿ ಹಗರಣ ಸಂಬಂಧ ಸಿಎಂ, ಗೃಹ ಸಚಿವರ ರಾಜೀನಾಮೆ ಕೇಳುವ ನೈತಿಕತೆ ಕಾಂಗ್ರೆಸ್, ಜೆಡಿಎಸ್ ನಾಯಕರಿಗೆ ಇಲ್ಲ ಎಂದು ಮಾಜಿ ಸಚಿವ ಕೆ.ಎಸ್. ಈಶ್ವರಪ್ಪ ಹೇಳಿದ್ದಾರೆ.

BIGG NEWS: ನಿರಂತರ 40 ಗಂಟೆ ಕಾರ್ಯಾಚರಣೆ ನಡೆಸಿದ್ರೂ ಬಾಲಕಿ ಪತ್ತೆಯಾಗಿಲ್ಲ; SDRF ತಂಡ ಆಗಮನ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಿಎಸ್ ಐ ನೇಮಕಾತಿ ಹಗರಣ ಸಂಬಂಧ ಸಿಎಂ ಬೊಮ್ಮಾಯಿ, ಗೃಹ ಸಚಿವ ಅರಗ ಜ್ಞಾನೇಂದ್ರ ಅವರ ರಾಜೀನಾಮೆ ಕೇಳುವ ನೈತಿಕತೆ ಕಾಂಗ್ರೆಸ್, ಜೆಡಿಎಸ್ ಗೆ ಇಲ್ಲ. ದೀಪ ಆರುವ ಮೊದಲು ಜೋರಾಗಿ ಉರಿಯುತ್ತದೆ. ಅದೇ ರೀತಿ ಸಿದ್ದರಾಮಯ್ಯ, ಡಿ.ಕೆ. ಶಿವಕುಮಾರ್ ಹಾರಾಡುತ್ತಿದ್ದಾರೆ. ಅದು ಯಾವಾಗ ಆರಿ ಹೋಗುತ್ತದೋ ನೋಡೋಣ ಎಂದು ವಾಗ್ದಾಳಿ ನಡೆಸಿದ್ದಾರೆ.

BIGG NEWS : ಪಿಯುಸಿ ವಿದ್ಯಾರ್ಥಿಗಳು ಕಾಲೇಜಿಗೆ ಬೈಕ್ ತರುವಂತಿಲ್ಲ : ಸಂಚಾರ ವಿಭಾಗದ ಪೊಲೀಸ್ ಆಯುಕ್ತ ರವಿಕಾಂತೇಗೌಡ

ಇನ್ನು ಜಮೀರ್ ಅಹ್ಮದ್ ಖಾನ್ ಅವರು ಬಹಳ ಅಕ್ರಮ ಆಸ್ತಿ ಸಂಪಾದನೆ ಮಾಡಿದ್ದಾರೆ. ಈ ಹಿನ್ನೆಲೆಯಲ್ಲಿ ಅವರ ಮೇಲೆ ಎಸಿಬಿ ದಾಳಿ ಮಾಡಿದ್ದಾರೆ .ಜಮೀರ್ ಅಹ್ಮದ್ ಖಾನ್ ಮೇಲೆ ದಾಳಿ ಅನಗತ್ಯ ದಾಳಿ, ರಾಜಕೀಯ ಪ್ರೇರಿತ ದಾಳಿ ಎಂದು ಡಿ.ಕೆ.ಶಿವಕುಮಾರ್ ಹಾಗೂ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ ಹೀಗಾಗಿ ಅವರು  ಎಸಿಬಿ ಕ್ಷಮೆ ಕೇಳಬೇಕು.ಕ್ಷಮೆ ಕೇಳದಿದ್ದರೆ ಸಿದ್ದರಾಮಯ್ಯ ವಿಪಕ್ಷ ಸ್ಥಾನವನ್ನೂ ಕಳೆದುಕೊಳ್ಳಲಿದ್ದಾರೆ ಎಂದರು.

BIGG NEWS: ಮಹೇಂದ್ರ ಸಿಂಗ್‌ ಧೋನಿ ಹುಟ್ಟುಹಬ್ಬಕ್ಕೆ ಕೌಂಟ್‌ ಡೌನ್; ಅಭಿಮಾನಿಗಳಿಂದ ರೆಡಿಯಾಗಿದೆ 41 ಅಡಿ ಎತ್ತರದ ಬೃಹತ್ ಕಟೌಟ್

Share.
Exit mobile version