ಬೆಂಗಳೂರು : ರಾಜ್ಯ ಸರ್ಕಾರದ ಹರ್ ಘರ್ ತಿರಂಗಾ ಜಾಹೀರಾತಿನಲ್ಲಿ ಮಾಝಿ ಪ್ರಧಾನಿ ಜವಾಹರ್ ಲಾಲ್ ನೆಹರೂ ಅವರ ಫೋಟೋ ಹಾಕದಿದ್ದಕ್ಕೆ ಕಾಂಗ್ರೆಸ್ ಆಕ್ರೋಶ ವ್ಯಕ್ತಪಡಿಸಿದೆ.
ಈ ಸಂಬಂಧ ಟ್ವೀಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿಕವುಮಾರ್, ಸಾರ್ವಜನಿಕರ ಹಣದಲ್ಲಿ ದ್ವೇಷ ತೀರಿಸಿಕೊಳ್ಳುವ ಚಾಳಿಯನ್ನು BJP ಮುಂದುವರಿಸಿದೆ. ಸ್ವಾತಂತ್ರ್ಯ ಚಳುವಳಿಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಪಂ. ಜವಾಹರ್ಲಾಲ್ ನೆಹರೂ ಅವರನ್ನು ಬ್ರಿಟಿಷರು 9 ಬಾರಿ ಬಂಧಿಸಿ 3259 ದಿನ ಜೈಲಿನಲ್ಲಿರಿಸಿದ್ದರು. ರಾಜಕೀಯ ದುರುದ್ದೇಶದಿಂದ ನೆಹರೂ ಅವರ ಹೆಸರನ್ನು ಜಾಹೀರಾತಿನಿಂದ ಕೈ ಬಿಟ್ಟಿರುವುದು ಅಕ್ಷಮ್ಯ ಎಂದು ಕಿಡಿಕಾರಿದ್ದಾರೆ.
ಸಾರ್ವಜನಿಕರ ಹಣದಲ್ಲಿ ದ್ವೇಷ ತೀರಿಸಿಕೊಳ್ಳುವ ಚಾಳಿಯನ್ನು BJP ಮುಂದುವರಿಸಿದೆ. ಸ್ವಾತಂತ್ರ್ಯ ಚಳುವಳಿಯಲ್ಲಿ ಪಾಲ್ಗೊಂಡಿದ್ದಕ್ಕಾಗಿ ಪಂ. ಜವಾಹರ್ಲಾಲ್ ನೆಹರೂ ಅವರನ್ನು ಬ್ರಿಟಿಷರು 9 ಬಾರಿ ಬಂಧಿಸಿ 3259 ದಿನ ಜೈಲಿನಲ್ಲಿರಿಸಿದ್ದರು. ರಾಜಕೀಯ ದುರುದ್ದೇಶದಿಂದ ನೆಹರೂ ಅವರ ಹೆಸರನ್ನು ಜಾಹೀರಾತಿನಿಂದ ಕೈ ಬಿಟ್ಟಿರುವುದು ಅಕ್ಷಮ್ಯ.
1/3— DK Shivakumar (@DKShivakumar) August 14, 2022
ನೆಹರೂ ಅವರನ್ನು ಅಪಮಾನಿಸುವ ಹಾಗೂ ಸರ್ಕಾರಿ ಜಾಹೀರಾತಿನಿಂದ ಕೈಬಿಡುವುದರಿಂದ ಇತಿಹಾಸ ಎಂದಿಗೂ ಅವರನ್ನು ಮರೆಯುವುದಿಲ್ಲ. ಆದರೆ ಚರಿತ್ರೆಯು ನಿಮ್ಮ ಸಣ್ಣತನವನ್ನು ನೆನಪಿಡುತ್ತದೆ ಎಂದು ಹೇಳಿದ್ದಾರೆ.
ನೆಹರೂ ಅವರನ್ನು ಅಪಮಾನಿಸುವ ಹಾಗೂ ಸರ್ಕಾರಿ ಜಾಹೀರಾತಿನಿಂದ ಕೈಬಿಡುವುದರಿಂದ ಇತಿಹಾಸ ಎಂದಿಗೂ ಅವರನ್ನು ಮರೆಯುವುದಿಲ್ಲ. ಆದರೆ ಚರಿತ್ರೆಯು ನಿಮ್ಮ ಸಣ್ಣತನವನ್ನು ನೆನಪಿಡುತ್ತದೆ.
2/3— DK Shivakumar (@DKShivakumar) August 14, 2022
ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದು ಜೈಲಿನಿಂದ ಹೊರಬಂದ ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರನಾದರೆ, ನಾಲ್ಕು ಆಂಗ್ಲೋ ಮೈಸೂರು ಯುದ್ಧ ಮಾಡಿ ತನ್ನ ಮಕ್ಕಳನ್ನು ಬ್ರಿಟಿಷರಿಗೆ ಒತ್ತೆ ಇಟ್ಟು ಸಮರದಲ್ಲಿ ಮಡಿದ ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರ ಏಕಲ್ಲ? ಎಂದು ಪ್ರಶ್ನಿಸಿದ್ದಾರೆ.
ಬ್ರಿಟಿಷರಿಗೆ ಕ್ಷಮಾಪಣಾ ಪತ್ರ ಬರೆದು ಜೈಲಿನಿಂದ ಹೊರಬಂದ ಸಾವರ್ಕರ್ ಸ್ವಾತಂತ್ರ್ಯ ಹೋರಾಟಗಾರನಾದರೆ, ನಾಲ್ಕು ಆಂಗ್ಲೋ ಮೈಸೂರು ಯುದ್ಧ ಮಾಡಿ ತನ್ನ ಮಕ್ಕಳನ್ನು ಬ್ರಿಟಿಷರಿಗೆ ಒತ್ತೆ ಇಟ್ಟು ಸಮರದಲ್ಲಿ ಮಡಿದ ಟಿಪ್ಪು ಸುಲ್ತಾನ್ ಸ್ವಾತಂತ್ರ್ಯ ಹೋರಾಟಗಾರ ಏಕಲ್ಲ?
3/3— DK Shivakumar (@DKShivakumar) August 14, 2022