ಬೆಂಗಳೂರು : ಬಿರುಕು ಬಿಟ್ಟಿರುವ ಕಾಂಗ್ರೆಸ್ ಮನೆ ಸಿದ್ದರಾಮೋತ್ಸವದ ಬಳಿಕ ನೆಲಸಮವಾಗಲಿದೆ ಎಂದು ರಾಜ್ಯ ಬಿಜೆಪಿ ಘಟಕ ಲೇವಡಿ ಮಾಡಿದೆ.
ಈ ಕುರಿತು ಸರಣಿ ಟ್ವೀಟ್ ಮಾಡಿರುವ ರಾಜ್ಯ ಬಿಜೆಪಿ ಘಟಕ, ಬಿರುಕು ಬಿಟ್ಟಿರುವ ಕಾಂಗ್ರೆಸ್ ಮನೆ ಸಿದ್ದರಾಮೋತ್ಸವದ ಬಳಿಕ ನೆಲಸಮವಾಗಲಿದೆ. ಮನೆಯೊಳಗಿದ್ದವರು ಗುಳೆ ಹೊರಡಲನುವಾಗಿದ್ದಾರೆ. ಅಕ್ಟೊಬರ್ ತಿಂಗಳಲ್ಲಿ ನಡೆಲಿರುವ ಭಾರತ್ ಜೋಡೋ ಕಾರ್ಯಕ್ರಮಕ್ಕೂ ನಾಯಕರು ಸಿಗಲಾರದಷ್ಟು ಕಾಂಗ್ರೆಸ್ ಖಾಲಿಯಾಗಲಿದೆ ಎಂದು ವ್ಯಂಗ್ಯವಾಡಿದೆ.
ಬಿರುಕು ಬಿಟ್ಟಿರುವ ಕಾಂಗ್ರೆಸ್ ಮನೆ ಸಿದ್ದರಾಮೋತ್ಸವದ ಬಳಿಕ ನೆಲಸಮವಾಗಲಿದೆ. ಮನೆಯೊಳಗಿದ್ದವರು ಗುಳೆ ಹೊರಡಲನುವಾಗಿದ್ದಾರೆ.
ಅಕ್ಟೊಬರ್ ತಿಂಗಳಲ್ಲಿ ನಡೆಲಿರುವ ಭಾರತ್ ಜೋಡೋ ಕಾರ್ಯಕ್ರಮಕ್ಕೂ ನಾಯಕರು ಸಿಗಲಾರದಷ್ಟು ಕಾಂಗ್ರೆಸ್ ಖಾಲಿಯಾಗಲಿದೆ.#ಕಾಂಗ್ರೆಸ್ಛೋಡೋಯಾತ್ರೆ
— BJP Karnataka (@BJP4Karnataka) July 15, 2022
ಭಾರತ್ ಜೋಡೋ ಅಭಿಯಾನ ಮತ್ತು ಸಿದ್ದರಾಮೋತ್ಸವ! ಈ ಎರಡು ಕಾರ್ಯಕ್ರಮಗಳು ಕಾಂಗ್ರೆಸ್ ಪಕ್ಷವನ್ನು ಮಕಾಡೆ ಮಲಗಿಸಲಿದೆ ಎಂದು ಹೇಳಿದೆ.
ಭಾರತ್ ಜೋಡೋ ಅಭಿಯಾನದ ಅಂಗವಾಗಿ ಕರ್ನಾಟಕದಲ್ಲಿ ಪಾದಯಾತ್ರೆ ಮಾಡಲು ಉದ್ದೇಶಿಸಿರುವ ರಾಹುಲ್ ಗಾಂಧಿ ಅವರೇ, ಭಾರತ ಈಗ ಮತ್ತಷ್ಟು ಬಲಿಷ್ಠವಾಗಿದೆ. ಮುರಿದು ಹೋಗಿರುವುದು ಕಾಂಗ್ರೆಸ್ ಪಕ್ಷ, ಮೊದಲು ಕಾಂಗ್ರೆಸ್ ಜೋಡೋ ಅಭಿಯಾನ ಮಾಡಿ. ಮುಂದೊಂದು ದಿನ ಕಾಂಗ್ರೆಸ್ ಪಕ್ಷದ ಬಾಗಿಲು ಮುಚ್ಚಲೂ ಹಿಂಬಾಲಕರು ಸಿಗಲಾರರು ಎಂದು ವ್ಯಂಗ್ಯವಾಡಿದೆ.
BREAKING NEWS: ಮಾನ್ಸೂನ್ ಅಧಿವೇಶನಕ್ಕೂ ಮುನ್ನ ಸಂಸತ್ತಿನಲ್ಲಿ ಧರಣಿ ಮಾಡುವಂತಿಲ್ಲ: ಪಿಸಿ ಮೋದಿ ಆದೇಶ