ಬೆಂಗಳೂರು : ರಾಜ್ಯ ತೋಟಗಾರಿಕಾ ಸಚಿವ ಮುನಿರತ್ನ ವಿರುದ್ಧ ಶೇ. 40 ಪರ್ಸೆಂಟ್ ಕಮಿಷನ್ ಆರೋಪ ಮಾಡಿದ್ದ ಪ್ರಕರಣ ಸಂಬಂಧ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ.ಕೆಂಪಣ್ಣ ಸೇರಿ ನಾಲ್ವರನ್ನು ವೈಯಾಲಿ ಕಾವಲ್ ಪೊಲೀಸ್ ಠಾಣೆ ಪೊಲೀಸರು ಬಂಧಿಸಿದ್ದಾರೆ.
BIGG NEWS : ವರ್ಗಾವಣೆಯ ನಿರೀಕ್ಷೆಯಲ್ಲಿದ್ದ ರಾಜ್ಯ ಸರ್ಕಾರಿ ನೌಕರರಿಗೆ ಸಿಎಂಅಧ್ಯಕ್ಷ ಬಿಗ್ ಶಾಕ್!
ಸಚಿವ ಮುನಿರತ್ನ ಅವರು ಡಿ.ಕೆಂಪಣ್ಣ ಸೇರಿದಂತೆ 19 ಮಂದಿ ವಿರುದ್ಧ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ದಾಖಲಿಸಿದ್ದರು. ಈ ಪ್ರಕರಣದ ವಿಚಾರಣೆ ನಡೆಸಿದ ಬೆಂಗಳೂರಿನ 8 ನೇ ಎಸಿಎಂಎಂ ನ್ಯಾಯಾಲಯವು ಆರೋಪಿಗಳ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿ ಮಾಡಿತ್ತು.
ಸಚಿವ ಮುನಿರತ್ನ ಸೇರಿದಂತೆ ಹಲವರು 40 ಪರ್ಸೆಂಟ್ ಕಮಿಷನ್ ಕೇಳುತ್ತಾರೆ ಎಂದು ಆರೋಪ ಮಾಡಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ ಅವರು ಈ ಸಂಬಂಧ ಪ್ರಧಾನಿ ಮೋದಿ ಅವರಿಗೂ ಪತ್ರ ಬರೆದಿದ್ದರು.