ನವದೆಹಲಿ: ದೇಶದಲ್ಲಿ ಕೊರೊನಾ ಸೋಂಕಿನ ಪ್ರಮಾಣ ಹೆಚ್ಚುತ್ತಲೇ ಇದೆ. ಹೀಗಾಗಿ ಇನ್ನೇನು 75ನೇ ಸ್ವಾತಂತ್ರ್ಯ ದಿನಾಚರಣೆ ಹತ್ರ ಬರಲಿದೆ. ಈ ವೇಳೆ ಬೃಹತ್ ಸಭೆ-ಸಮಾರಂಭ ಆಯೋಜಿಸದಂತೆ ರಾಜ್ಯಗಳಿಗೆ ಕೇಂದ್ರ ಸರ್ಕಾರ ಸೂಚಿಸಿದೆ.
BIGG NEWS : ಹುಲಿಹೈದರ ಗ್ರಾಮದಲ್ಲಿ ಮಾರಾಮಾರಿ ಕೇಸ್ : 15 ಕ್ಕೂ ಹೆಚ್ಚು ಆರೋಪಿಗಳು ಪೊಲೀಸರ ವಶಕ್ಕೆ
ಸ್ವಾತಂತ್ರ್ಯ ದಿನಾಚರಣೆ ಸಭೆ-ಸಮಾರಂಭಗಳಲ್ಲಿ ಹೆಚ್ಚಿನ ಜನಸಂದಣಿಗೆ ಅವಕಾಶ ನೀಡಬೇಡಿ. ಕಾರ್ಯಕ್ರಮಗಳಲ್ಲಿ ಕೋವಿಡ್ ಮಾರ್ಗಸೂಚಿಗಳನ್ನು ಅನುಸರಿಸುವಂತೆ ಸೂಚನೆ ನೀಡಿದೆ.
ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಪ್ರತಿ ಜಿಲ್ಲೆಯ ಪ್ರಮುಖ ಸ್ಥಳದಲ್ಲಿ ‘ಸ್ವಚ್ಛ ಭಾರತ್’ ಅಭಿಯಾನ ಕೈಗೊಳ್ಳಿ. ತಿಂಗಳ ಅವಧಿಯ ಅಭಿಯಾನ ಕೈಗೊಂಡು, ನಾಗರಿಕರು ಸ್ವಯಂಪ್ರೇರಿತರಾಗಿ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ನೋಡಿಕೊಳ್ಳಲು ತಿಳಿಸಿದೆ.