ಚಿತ್ರದುರ್ಗ : ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯದ ಆರೋಪದ ಹಿನ್ನೆಲೆಯಲ್ಲಿ ಪೋಲಿಸ್ ಕಸ್ಟಡಿಯಲ್ಲಿರುವ ಮುರುಘಾಮಠದ ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದೆ.
ಚಿತ್ರದುರ್ಗದ ನ್ಯಾಯಾಲಯದಲ್ಲಿ ಇಂದು ಶ್ರೀಗಳ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ಮುರುಘಾ ಶರಣರಿಗೆ ಇಂದು ಜೈಲಾ? ಬೇಲಾ? ನಿರ್ಧಾರವಾಗಲಿದೆ. ಸದ್ಯ ಪೊಲೀಸ್ ಕಸ್ಟಡಿಯಲ್ಲಿರುವ ಮುರುಘಾಶ್ರೀ ಮೂರು ರಾತ್ರಿ ಡಿವೈಎಸ್ಪಿ ಕಚೇರಿಯಲ್ಲಿ ಕಳೆದಿದ್ದಾರೆ.
ತನಿಖಾಧಿಕಾರಿ ಡಿವೈಎಸ್ಪಿ ಅನಿಲ್ ಕುಮಾರ್ ನೇತೃತ್ವದಲ್ಲಿ ವಿಚಾರಣೆ ನಡೆಸಲಾಗಿದ್ದು, ಚಿತ್ರದುರ್ಗ ಜಿಲ್ಲಾ 2ನೇ ಅಪರ ಮತ್ತು ಸತ್ರ ನ್ಯಾಯಾಲಯದಲ್ಲಿ ಇಂದು ಪ್ರಕರಣ 3ನೇ ಆರೋಪಿ ಮುರುಘಾಮಠದ ಉತ್ತರಾಧಿಕಾರಿನಿರೀಕ್ಷಣಾ ಜಾಮೀನು ಅರ್ಜಿ ವಿಚಾರಣೆ ನಡೆಯಲಿದ್ದು, ನಿರೀಕ್ಷಣಾ ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ ನೀಡಲಾಗುತ್ತದೆ ಎನ್ನಲಾಗಿದೆ.