ಚಿತ್ರದುರ್ಗ : ಚಿತ್ರದುರ್ಗದ ಮುರಘಾಮಠದ ಶ್ರೀಗಳ ವಿರುದ್ಧ ಫೋಕ್ಸೋ ಪ್ರಕರಣದ ಹಿನ್ನೆಲೆಯಲ್ಲಿ ಮಠದ ಶಿವಮೂರ್ತಿ ಶ್ರೀಗಳನ್ನು ಬಂಧಿಸಲಾಗಿದೆ. ಸದ್ಯ ಅವರನನ್ನು 14 ದಿನಗಳ ನ್ಯಾಯಾಂಗ ಬಂಧನವನ್ನು ವಿಧಿಸಲಾಗಿದ್ದು, ಚಿತ್ರದುರ್ಗದ ಜಿಲ್ಲಾ ಕಾರಾಗೃಹ ಕರೆದೊಯ್ಯಲಾಗಿದೆ.
BIGG BREAKING NEWS : ಮುರುಘಾಮಠದ ಶ್ರೀಗಳಿಗೆ ಎದೆನೋವು : ಶ್ರೀಗಳು ಜೈಲಿನಿಂದ ಆಸ್ಪತ್ರೆಗೆ ಶಿಫ್ಟ್
ಮುರುಘಾಮಠದ ಶ್ರೀಗಳ ಬಂಧನದ ಕುರಿತಂತೆ ಪ್ರತಿಕ್ರಿಯೆ ಮಠದ ಪರ ವಕೀಲ ಉಮೇಶ್, ಮುರುಘಾ ಮಠದ ಪೀಠಾಧ್ಯಕ್ಷ ಶಿವಮೂರ್ತಿ ಮುರುಘಾ ಶರಣರನ್ನು ಪೊಲೀಸರು ಬಂಧಿಸಿಲ್ಲ. ಕಾನೂನಿಗೆ ಗೌರವ ನೀಡಲೆಂದು ಸ್ವಾಮೀಜಿಯೇ ಪೊಲೀಸರಿಗೆ ಶರಣಾಗಿದ್ದಾರೆ. ಮಹಿಳಾ ವಾರ್ಡನ್ ಹೇಳಿಕೆಯ ಆಧಾರದ ಮೇಲೆ ಬಂಧನ ಆಗಿಲ್ಲ. ಬೇರೆ ಪ್ರಕರಣದ ವಿಚಾರವಾಗಿ ಮಹಿಳಾ ವಾರ್ಡನ್ ವಿಚಾರಣೆ ನಡೆದಿದೆ.
ಶ್ರೀಗಳಿಗೆ ಜಾಮೀನು ಕೋರಿ ಇಂದು ಕೋರ್ಟ್ಗೆ ಮತ್ತೆ ಅರ್ಜಿ ಸಲ್ಲಿಸುತ್ತೇವೆ. ನಾವು ನಿನ್ನೆ ನ್ಯಾಯಾಲಯಕ್ಕೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿ ರದ್ದಾಗಿದೆ. ಇಂದು ಮತ್ತೊಮ್ಮೆ ಜಾಮೀನಿಗೆ ಅರ್ಜಿ ಸಲ್ಲಿಸುತ್ತೇವೆ. ಮುರುಘಾಶ್ರೀಗಳಿಗೆ ಗೆದ್ದು ಬರುವ ವಿಶ್ವಾಸ ಇದೆ ಎಂದು ಅವರು ಹೇಳಿದರು.