ಬೆಂಗಳೂರು : ರಾಜ್ಯದಲ್ಲಿ ಕೊರೊನಾ ರೂಪಾಂತರಿ ವೈರಸ್ ಭೀತಿ ಹಿನ್ನೆಲೆಯಲ್ಲಿ ಇಂದು ಕೋವಿಡ್ ನಿಯಂತ್ರಣಕ್ಕೆ ಕರೆಯಲಾಗಿದ್ದ ತುರ್ತು ಸಭೆಯನ್ನು ಮುಂದೂಡಲಾಗಿದೆ.
ರಾಜ್ಯದಲ್ಲಿ ಕೋವಿಡ್ ನಿಯಂತ್ರಣಕ್ಕೆ ಕರ್ನಾಟಕ ವಿಪತ್ತ ನಿರ್ವಹಣಾ ಪ್ರಾಧಿಕಾರದ ಉಪಾಧ್ಯಕ್ಷ, ಕಂದಾಯ ಸಚಿವ ಆರ್.ಅಶೋಕ್ ನೇತೃತ್ವದಲ್ಲಿ ಆರೋಗ್ಯ ಇಲಾಖೆಯ ಅಧಿಕಾರಿಗಳ ಜೊತೆಗೆ ಸಭೆ ನಿಗದಿಪಡಿಸಲಾಗಿತ್ತು. ಆದರೆ ಸಭೆಯನ್ನು ಸೋಮವಾರಕ್ಕೆ ಮುಂದೂಡಲಾಗಿದೆ.
ಈ ಕುರಿತು ಮಾಹಿತಿ ನೀಡಿರುವ ಸಚಿವ ಆರ್.ಅಶೋಕ್, ಇಂದು ವಿಧಾನಸಭೆಯಲ್ಲಿ ನಡೆಯಬೇಕಿದ್ದ ಕೋವಿಡ್ ನಿಯಂತ್ರಣ ಸಭೆಯನ್ನು ಮುಂದೂಡಲಾಗಿದೆ. ವಿಪತ್ತು ನಿರ್ವಹಣಾ ಬಹುತೇಕ ಅಧಿಕಾರಿಗಳು ಬೆಳಗಾವಿ ಅಧಿವೇಶನದಲ್ಲಿ ಭಾಗಿಯಾಗಿದ್ದು, ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತುಮಕೂರು ಹಾಗೂ ಚಿಕ್ಕಬಳ್ಳಾಪುರ ಜಿಲ್ಲಾ ಪ್ರವಾಸದಲ್ಲಿದ್ದು, ಹೀಗಾಗಿ ಸಭೆಯನ್ನು ಮುಂದೂಡಲಾಗಿದೆ ಎಂದು ತಿಳಿಸಿದ್ದಾರೆ.