ಚಿಕ್ಕಬಳ್ಳಾಪುರ : ರಾಜ್ಯದಲ್ಲಿ ಕೊರೊನಾ ವೈರಸ್ ಸೋಂಕಿನ ಭೀತಿ ಹೆಚ್ಚಳದ ಹಿನ್ನೆಲೆಯಲ್ಲಿ ನಾಳೆ ಸಭೆ ನಡೆಸಿ ಮುಂಜಾಗ್ರತ ಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.
BREAKING NEWS : ರಾಜ್ಯದಲ್ಲಿ ಮತ್ತೊಂದು ಪಕ್ಷ ಉದಯ : ಮಾಜಿ ಸಚಿವ ಜನಾರ್ದನ ರೆಡ್ಡಿಯಿಂದ ಹೊಸ ಪಕ್ಷ ಘೋಷಣೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಳೆ ಸುವರ್ಣಸೌಧದಲ್ಲಿ ವಿಪತ್ತು ನಿರ್ವಹಣಾ ಸಮಿತಿ ಸಭೆ ನಡೆಯಲಿದ್ದು, ಕೊರೊನಾ 2 ನೇ ಅಲೆಯಲ್ಲಿ ಆದ ಆವಾಂತರ ಮರುಕಳಿಸಬಾರದು ಎಂದು ನಾಳೆ ಸಭೆಯಲ್ಲಿ ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚೆ ನಡೆಸುತ್ತೇವೆ ಎಂದು ಹೇಳಿದ್ದಾರೆ
ರಾಜ್ಯದಲ್ಲಿ ಇನ್ನೂ ಅನೇಕ ಜನರು ಬೂಸ್ಟರ್ ಡೋಸ್ ಹಾಕಿಸಿಕೊಂಡಿಲ್ಲ. ನಾಳೆ ನಡೆಯುವ ಸಭೆಯಲ್ಲೇ ಕ್ರಮ ಕೈಗೊಳ್ಳುತ್ತೇವೆ ಎಂದು ಹೇಳಲ್ಲ. ಮುಂಜಾಗ್ರತಾ ಕ್ರಮ ಕೈಗೊಳ್ಳುವ ಬಗ್ಗೆ ನಾಳೆ ಸಭೆಯಲ್ಲಿ ಚರ್ಚೆ ನಡೆಸುತ್ತೇವೆ. ಯಾವ ರೀತಿಯಲ್ಲಿ ಮಾರ್ಗಚಿ ಬಿಡುಗಡೆ ಮಾಡಬೇಕು? ಯಾವ ರೀತಿ ಜನರನ್ನು ಜಾಗೃತಗೊಳಿಸಬೇಕು ಎಂಬ ಬಗ್ಗೆ ತೀರ್ಮಾನ ಕೈಗೊಳ್ಳಲಾಗುತ್ತದೆ ಎಂದು ಹೇಳಿದ್ದಾರೆ.