ಬೆಳಗಾವಿ : ಬೆಳಗಾವಿಯ ಸುವರ್ಣಸೌಧದಲ್ಲಿ ಇಂದು ಸಂಜೆ 5 ಗಂಟೆಗೆ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಪಂಚಮಸಾಲಿ ಸಮುದಾಯಕ್ಕೆ 2 ಎ ಮೀಸಲಾತಿ ಸೇರಿದಂತೆ ವಿವಿಧ ಸಮುದಾಯಗಳ ಮೀಸಲಾತಿ ಬೇಡಿಕೆ ಬಗ್ಗೆ ಚರ್ಚೆ ನಡೆಯುವ ಸಾಧ್ಯತೆ ಇದೆ.
ಪೌರ ಕಾರ್ಮಿಕರಿಗೆ ಭರ್ಜರಿ ಗುಡ್ ನ್ಯೂಸ್: 42,000 ಪೌರ ನೌಕರರ ಖಾಯಂ, 2 ಸಾವಿರ ಸಂಕಷ್ಟ ಭತ್ಯೆ – ಸಿಎಂ ಬೊಮ್ಮಾಯಿ
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನೇತೃತ್ವದಲ್ಲಿ ಸಚಿವ ಸಂಪುಟ ಸಭೆ ನಿಗದಿಯಾಗಿದ್ದು, ಸಭೆಯಲ್ಲಿ ಹಲವು ಮಹತ್ವದ ವಿಚಾರಗಳು ಚರ್ಚೆಯಾಗಲಿದೆ. ಬೆಳಗಾವಿ ಚಳಿಗಾಲದ ಅಧಿವೇಶನ ಇಂದೇ ಮುಕ್ತಾಯಗೊಳ್ಳುವ ಸಾಧ್ಯತೆ ಇದೆ. ನಿಗದಿತ ಅವಧಿಗಿಂತ ಒಂದು ದಿನ ಮೊದಲೇ ಅಧಿವೇಶನ ಅಂತ್ಯಗೊಳ್ಳುವ ಸಾಧ್ಯತೆ ಇದೆ.
ಡಿ.17 ರಿಂದ ಆರಂಭವಾಗಿರುವ ಅಧಿವೇಶನ ಡಿ.30 ರವರೆಗೆ ನಿಗದಿಯಾಗಿತ್ತು, ಆದರೆ ಒಂದು ದಿನ ಮೊದಲೇ ಅಂದರೆ ನಾಳೆ ಅಧಿವೇಶನ ಅಂತ್ಯಗೊಳ್ಳುವ ಸಾಧ್ಯತೆ ಇದೆ. ಕೋವಿಡ್ ಸೋಂಕು ಉಲ್ಪಣ ಹಾಗೂ ಮಾರ್ಗಸೂಚಿ ಪಾಲನೆ ಹಿನ್ನೆಲೆ ಒಂದು ದಿನ ಮೊದಲೇ ಚಳಿಗಾಲದ ಅಧಿವೇಶನ ಸಮಾಫ್ತಿಗೊಳ್ಳಲಿದೆ ಎನ್ನಲಾಗಿದೆ. ಸದನ ಸಲಹಾ ಸಮಿತಿಯಲ್ಲಿ ಈ ಬಗ್ಗೆ ಚರ್ಚೆ ನಡೆದಿದೆ.