ಬೆಂಗಳೂರು : ರಾಜ್ಯ ವಿಧಾನಸಭೆ ಚುನಾವಣೆಗೆ ಭರ್ಜರಿ ಸಿದ್ಧತೆ ನಡೆಸಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಸಿದ್ದರಾಮಯ್ಯ ಅವರ ಬಸ್ ಯಾತ್ರೆ ಜೊತೆಗೇ ದಕ್ಷಿಣ ಕರ್ನಾಟಕದಲ್ಲಿ ಬಸ್ ಯಾತ್ರೆಗೆ ಸಿದ್ಧತೆ ಕೈಗೊಂಡಿದ್ದಾರೆ ಎನ್ನಲಾಗಿದೆ.
BREAKING NEWS : ಸ್ಯಾಂಡಲ್ ವುಡ್ ಹಾಸ್ಯ ನಟ `ಗಂಡಸಿ ನಾಗರಾಜ್’ ಇನ್ನಿಲ್ಲ| Gandasi Nagaraj is no more
ರಾಜ್ಯ ವಿಧಾನಸಭೆ ಚುನಾವಣೆಗೆ ಸಿದ್ಧತೆ, ಅಭ್ಯರ್ಥಿ ಆಯ್ಕೆ ಸೇರಿದಂತೆ ಹಲವು ಮಹತ್ವದ ವಿಚಾರಗಳ ಚರ್ಚೆ ನಡೆಸಲು ಇಂದು ಸಂಜೆ 4 ಗಂಟೆಗೆ ದೆಹಲಿಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಸಭೆ ನಡೆಸಲಿದೆ. ಸಭೆಯಲ್ಲಿ ಡಿ.ಕೆ.ಶಿವಕುಮಾರ್ ಅವರ ಬಸ್ ಯಾತ್ರೆಗೆ ಗ್ರೀನ್ ಸಿಗ್ನಲ್ ಸಿಗುವ ಸಾಧ್ಯತೆ ಇದೆ. ಉತ್ತರ ಕರ್ನಾಟಕದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ಬಸ್ ಯಾತ್ರೆ ಆರಂಭಗೊಂಡರೆ, ದಕ್ಷಿಣ ಕರ್ನಾಟಕದ ಕೋಲಾರ ಜಿಲ್ಲೆಯ ಕುರುಡುಮಲೈ ದೇವಸ್ಥಾನದಿಂದ ಡಿ.ಕೆ.ಶಿವಕುಮಾರ್ ಬಸ್ ಯಾತ್ರೆಗೆ ಚಾಲನೆ ಸಿಗಲಿದೆ ಎಂದು ಹೇಳಲಾಗುತ್ತಿದೆ.
ಜನವರಿ 3 ರಿಂದ ಸಿದ್ದರಾಮಮಯ್ಯನವರ ಬಸ್ ಯಾತ್ರೆ ಆರಂಭವಾಗಲಿದೆ. ಬಸವಕಲ್ಯಾಣದಿಂದ ಆರಂಭವಾಗಲಿರುವ ಸಿದ್ದು ಬಸ್ ಯಾತ್ರೆ, ಮೊದಲ ಹಂತದಲ್ಲಿ ಉತ್ತರ ಕರ್ನಾಟಕದ ಪ್ರಮುಖ 10ರಿಂದ 12 ಜಿಲ್ಲೆಗಳಲ್ಲಿ ಸಂಚರಿಸಲಿದೆ. ಸಿದ್ದರಾಮಯ್ಯ ಉತ್ತರ ಕರ್ನಾಟಕದಿಂದ ಪ್ರಾರಂಭ ಮಾಡಿದರೆ ಡಿ.ಕೆ.ಶಿವಕುಮಾರ್ ದಕ್ಷಿಣ ಕರ್ನಾಟಕ ಭಾಗದಿಂದ ಬಸ್ ಯಾತ್ರೆ ಮಾಡುವ ಸಾಧ್ಯತೆ ಇದೆ.