ಹಾಸನ: ಜಿಲ್ಲೆಯ ಪ್ರಸಿದ್ಧ ದೇವತೆ ಹಾಸನಾಂಬ ದೇವಸ್ಥಾನ ( Hasanamba Temple ) ದರ್ಶನಕ್ಕೆ ಪ್ರಸ್ತುತ ವರ್ಷದಲ್ಲಿ ದಿನಾಂಕವನ್ನು ನಿಗದಿ ಪಡಿಸಲಾಗಿದೆ. ಅಕ್ಟೋಬರ್ 13 ರಿಂದ 27ರವರೆಗೆ ಹಾಸನಾಂಬ ದರ್ಶನಕ್ಕೆ ಭಕ್ತರಿಗೆ ಅವಕಾಶ ಕಲ್ಪಿಸೋ ನಿರ್ಧಾರವನ್ನು ಕೈಗೊಳ್ಳಲಾಗಿದೆ.
ಈ ಬಗ್ಗೆ ಮಾಹಿತಿ ನೀಡಿದಂತ ಶಾಸಕ ಪ್ರೀತಂ ಗೌಡ ಅವರು, ಕಳೆದ ಮೂರು ವರ್ಷಗಳಿಂದ ಕೋವಿಡ್ ಕಾರಣದಿಂದಾಗಿ ಅದ್ಧೂರಿಯಾಗಿ ಹಾಸನಾಂಬೆ ಜಾತ್ರಾ ಮಹೋತ್ಸವವನ್ನು ನಡೆಸಲು ಆಗಿರಲಿಲ್ಲ. ಈ ವರ್ಷ ಅದ್ಧೂರಿಯಾಗಿ ನೆಡಸಲು ತೀರ್ಮಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಇನ್ನೂ ಅಕ್ಟೋಬರ್ 13 ರಿಂದ 27ರವರೆಗೆ ಹಾಸನಾಂಬೆ ತಾಯಿಯ ದರ್ಶನಕ್ಕೆ ಸಾರ್ವಜನಿಕರಿಗೆ ಅವಕಾಶ ಮಾಡಿಕೊಡಲಾಗುತ್ತಿದೆ. ಒಟ್ಟು 13 ದಿನಗಳ ಕಾಲ ಭಕ್ತರಿಗೆ ಹಾಸನಾಂಬೆ ದರ್ಶನಕ್ಕೆ ಅವಕಾಶ ನೀಡಲಾಗಿದೆ. ಅಕ್ಟೋಬರ್ 13ರಂದು ಹಾಸನಾಂಬ ತಾಯಿಯ ಬಾಗಿಲು ತೆರೆಯಲಾಗುತ್ತದೆ. ಅಂದು ಯಾರಿಗೂ ದರ್ಶನಕ್ಕೆ ಅವಕಾಶ ಇರೋದಿಲ್ಲ ಎಂದು ಹೇಳಿದ್ದಾರೆ.
ಅಂದಹಾಗೇ ಅಕ್ಟೋಬರ್ 13 ಹಾಗೂ ಅಕ್ಟೋಬರ್ 27ರಂದು ಹಾಸನಾಂಬೆ ಬಾಗಿಲು ತೆರೆಯುವ ಹಾಗೂ ಬಾಗಿಲು ಮುಚ್ಚುವ ನಿಮಿತ್ತ ಸಾರ್ವಜನಿಕರಿಗೆ ಅಂದು ದರ್ಶನಕ್ಕೆ ಅವಕಾಶ ಇರೋದಿಲ್ಲ. ಹೀಗಾಗಿ ತಪ್ಪದೇ ಅಕ್ಟೋಬರ್ 14 ರಿಂದ ಅಕ್ಟೋಬರ್ 26ರವರೆಗೆ ಹಾಸನಾಂಬೆ ದರ್ಶನ ಮಾಡಿಕೊಂಡು ಬರೋದು ಮರೆಯಬೇಡಿ.