ಬೆಂಗಳೂರು : ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕದ ಕುರಿತಂತೆ ಸಾಮಾಜಿಕ ಜಾಲತಾಣದಲ್ಲಿ ನಕಲಿ ಪೋಸ್ಟ್ ವೊಂದು ವೈರಲ್ ಆಗಿದೆ. ಮೇ. 12 ರಂದು ಮತದಾನ ನಡೆಯಲಿದ್ದು, ಮೇ. 15 ಕ್ಕೆ ಮತ ಎಣಿಕೆ ನಡೆಯಲಿದೆ ಎಂಬ ನಕಲಿ ವೇಳಾಪಟ್ಟಿಯನ್ನು ಹರಿಬಿಡಲಾಗಿದೆ.
ಕರ್ನಾಟಕ ವಿಧಾನಸಭೆ ಚುನಾವಣೆಗೆ ಚುನಾವಣಾ ಆಯೋಗವು ಇನ್ನೂ ಅಧಿಕೃತವಾಗಿ ದಿನಾಂಕ ಘೋಷಣೆ ಮಾಡಿಲ್ಲ. ಈ ನಡುವೆ ಸಾಮಾಜಿಕ ಜಾಲತಾಣದಲ್ಲಿ ಕರ್ನಾಟಕ ವಿಧಾನಸಭೆ ಚುನಾವಣೆ-2023 ವೇಳಾಪಟ್ಟಿ ಪ್ರಕಟಿಸಲಾಗಿದೆ ಎಂಬಂತೆ ಪೋಸ್ಟ್ ವೊಂದನ್ನು ಸಾಮಾಜಿಕ ಜಾಲತಾಣದಲ್ಲಿ ಹರಿಬಿಡಲಾಗಿದೆ.
ಹಾಲಿ ಸರಕಾರದ ಅಧಿಕಾರಾವಧಿ ಮೇ. 23 ಕ್ಕೆ ಅಂತ್ಯವಾಗಲಿದೆ. ಈವರೆಗೆ ಚುನಾವಣಾ ಆಯೋಗವು ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಾಂಕ ಘೋಷಣೆ ಮಾಡಿಲ್ಲ. ಆದರೆ ಈ ನಡುವೆ ನಕಲಿ ಪೋಸ್ಟ್ ವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗುತ್ತಿದ್ದು, ಮೇ. 12 ರಂದು ಮತದಾನ ನಡೆಯಲಿದ್ದು, ಮೇ. 15 ರಂದು ಮತ ಎಣಿಕೆ ನಡೆಯಲಿದೆ ಎಂಬ ನಕಲಿ ವೇಳಾಪಟ್ಟಿಯನ್ನು ಸೋಶಿಯಲ್ ಮೀಡಿಯಾದಲ್ಲಿ ಹರಿಬಿಡಲಾಗಿದೆ.
ನಕಲಿ ವೇಳಾಪಟ್ಟಿ