ಚಿಕ್ಕಮಗಳೂರು : ದತ್ತಪೀಠದಲ್ಲಿ ನಡೆಯುವ ದತ್ತಜಯಂತಿ ಹಿನ್ನೆಲೆ ಡಿಸೆಂಬರ್ 5ರ ಬೆಳಗ್ಗೆ 6 ಗಂಟೆಯಿಂದ ಡಿ.9ರ ಬೆಳಗ್ಗೆ 10 ಗಂಟೆಯವರೆ ಮುಳ್ಳಯ್ಯನಗಿರಿ ಭಾಗದ ಎಲ್ಲಾ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿಷೇಧ ಹೇರಲಾಗಿದೆ ಎಂದು ಜಿಲ್ಲಾಧಿಕಾರಿ ಕೆ.ಎನ್ ರಮೇಶ್ ತಿಳಿಸಿದ್ದಾರೆ.
BIGG NEWS : ಜೆಇ ಮೆದುಳು ಜ್ವರ ನಿಯಂತ್ರಣಕ್ಕೆ ಕ್ರಮ : ಇಂದಿನಿಂದ 1-15 ವರ್ಷದೊಳಗಿನ ಮಕ್ಕಳಿಗೆ ಶಾಲೆಗಳಲ್ಲೇ ಲಸಿಕೆ
ಚಿಕ್ಕಮಗಳೂರಿನ ಬಾಬಾ ಬುಡನ್ ಗಿರಿಯ ವಿವಾದಾತ್ಮಕ ದತ್ತ ಪೀಠದಲ್ಲಿ ಡಿಸೆಂಬರ್ 6, 7, 8 ರಂದು ದತ್ತ ಜಯಂತಿಗೆ ಹೈಕೋರ್ಟ್ ಅನುಮತಿ ಮಂಜೂರಾಗಿದೆ. ತೀವ್ರ ಕುತೂಹಲ ಕೆರಳಿಸಿದ್ದ ಪ್ರಕರಣದಲ್ಲಿ ಅನುಮತಿ ನೀಡಲಾಗಿದೆ.ಇನ್ನೂ, ದತ್ತಪೀಠದಲ್ಲಿ ದತ್ತಜಯಂತಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಗಿರಿಧಾಮಕ್ಕೆ ಭೇಟಿ ನೀಡುವ ಪ್ರವಾಸಿಗರಿಗೆ 5 ದಿನ ಪ್ರವೇಶ ನಿರ್ಬಂಧಿಸಲಾಗಿದೆ.
ಚಿಕ್ಕಮಗಳೂರಿನಲ್ಲಿ ದತ್ತಜಯಂತಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ಪ್ರವಾಸಿಗರಿಗೆ 5 ದಿನಗಳ ಕಾಲ ನಿರ್ಬಂಧ ಹೇರಿ ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಆದೇಶ ಹೊರಡಿಸಿದ್ದಾರೆ. ಈ ಬಗ್ಗೆ ಮಾಹಿತಿ ನೀಡಿರುವ ಜಿಲ್ಲಾಧಿಕಾರಿ ಕೆ ಎನ್ ರಮೇಶ್ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಡಿಸೆಂಬರ್ 6ರಿಂದ 8 ರವರೆಗೆ ದತ್ತಜಯಂತಿ ಕಾರ್ಯಕ್ರಮ ನಡೆಯಲಿದ್ದು, ಡಿಸೆಂಬರ್ 5ರ ಬೆಳಗ್ಗೆ 9 ಗಂಟೆಯಿಂದ ಡಿಸೆಂಬರ್ 9ರ ಬೆಳಗ್ಗೆ 10 ಗಂಟೆಯವರೆಗೆ ಪ್ರವಾಸಿ ತಾಣಗಳಾದ ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗ, ಮಾಣಿಕ್ಯಧಾರ, ಹೊನ್ನಮ್ಮನಹಳ್ಳಕ್ಕೆ ಪ್ರವಾಸಿಗರ ಭೇಟಿಯನ್ನು ತಾತ್ಕಾಲಿಕವಾಗಿ ನಿರ್ಬಂಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ. ಈ ದಿನಗಳಲ್ಲಿ ಪ್ರವಾಸಿಗರು ಹೋಟೆಲ್, ಹೋಂ ಸ್ಟೇ ಮತ್ತು ರೆಸಾರ್ಟ್ಗಳಲ್ಲಿ ವಾಸ್ತವ್ಯಕ್ಕೆ ಕಾಯ್ದಿರಿಸಿಕೊಂಡಿದ್ದರೆ, ವಾಸ್ತವ್ಯ ಮಾಡಲು ಯಾವುದೇ ನಿರ್ಬಂಧವಿರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ತಿಳಿಸಿದ್ದಾರೆ.
Rain in karnataka : ಚಳಿಯಿಂದ ತತ್ತರಿಸಿರುವ ಜನತೆಗೆ ಶಾಕ್ : ಇಂದಿನಿಂದ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ