ಚಿಕ್ಕಮಂಗಳೂರು : ನವೆಂಬರ್ 13 ರ ಇಂದಿನಿಂದ ಗುರುತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದಲ್ಲಿ ಶ್ರೀರಾಮಸೇನೆ ಆಶ್ರಯದಲ್ಲಿ ನಡೆಯಲಿರುವ ದತ್ತಮಾಲಾ ಅಭಿಯಾನದ ಹಿನ್ನೆಲೆಯಲ್ಲಿ ಜಿಲ್ಲಾಡಳಿತ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಂಡಿದೆ.
ದತ್ತಮಾಲೆ ಅಭಿಯಾನ ಹಿನ್ನಲೆಯಲ್ಲಿ ಜಿಲ್ಲಾಡಳಿತವು ಅಗತ್ಯ ಕ್ರಮಗಳನ್ನು ಕೈಗೊಂಡಿದ್ದು, 5 ರಾಜ್ಯ ಸಶಸ್ತ್ರ ಮೀಸಲು ಪಡೆ, 11 ಜಿಲ್ಲಾ ಸಶಸ್ತ್ರ ಮೀಸಲು ಪಡೆ ಸೇರಿದಂತೆ 1,500 ಸಿಬ್ಬಂದಿಯನ್ನು ನಿಯೋಜನೆ ಮಾಡಲಾಗಿದೆ.
ಪೊಲೀಸ್ ಇಲಾಖೆ ಮತ್ತು ಜಿಲ್ಲಾಡಳಿತ ಮಾಡಿಕೊಂಡಿರುವ ಇತರೇ ಮುಂಜಾಗ್ರತಾ ಕ್ರಮಗಳು / ಸಿದ್ಧತೆಗಳು:
ಕಾನೂನು ಸುವ್ಯವಸ್ಥೆ ನಿರ್ವಹಣೆ ಮಾಡಲು ಸೂಕ್ಷ್ಮ ಸ್ಥಳಗಳಲ್ಲಿ ಹಾಗೂ ಚೆಕ್ಪೋಸ್ಟ್ಗಳಲ್ಲಿ ಕರ್ತವ್ಯ ನಿರ್ವಹಿಸುವ ಪೊಲೀಸ್ ಅಧಿಕಾರಿ ಸಿಬ್ಬಂದಿಗಳಿಗೆ ಸಂದರ್ಭಾನುಸಾರ ಅದೇಶ ನೀಡಲು ಒಟ್ಟು 32 ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳನ್ನು ನಿಯೋಜಿಸಲಾಗಿರುತ್ತದೆ. – ಜಿಲ್ಲೆಯಲ್ಲಿರುವ ಎಲ್ಲಾ ಉಪವಿಭಾಗ / ತಾಲ್ಲೂಕ್ ದಂಡಾಧಿಕಾರಿಗಳು ಕೇಂದ್ರ ಸ್ಥಾನದಲ್ಲಿರುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ.
ಸಮಾಜ ಘಾತಕರುಗಳ ಚಲನವಲನದ ಮೇಲೆ ನಿಗಾ ಇಡಲು ಜಿಲ್ಲೆಯಾದ್ಯಂತ ಒಟ್ಟು: 26 ಸ್ಥಳಗಳಲ್ಲಿ ಚೆಕ್ಪೋಸ್ಟ್ಗಳನ್ನು ತೆರೆಯಲಾಗಿದ್ದು, ಚೆಕ್ಪೋಸ್ಟ್ಗಳು ದಿನಾಂಕ 12/11/2022 ಬೆಳಿಗ್ಗೆಯಿಂದ ದಿನಾಂಕ 14/11/222 ಬೆಳಿಗ್ಗೆ ಯವರೆಗೆ ದಿನದ 24 ಗಂಟೆ ಕಾರ್ಯಪ್ರವೃತ್ತರಾಗಿರುತ್ತವೆ.
ಶ್ರೀ ಗುರುದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾ ಸಂಸ್ಥೆ, ಎ.ಡಿ.ಪೀಠದಲ್ಲಿ ಹಾಗೂ ಸುತ್ತಮುತ್ತಲಿನ ಪ್ರವಾಸಿ ತಾಣಗಳಿಗೆ ದಿನಾಂಕ 13/11/20122 ರಂದು ಬೆಳಿಗ್ಗೆ 6-00 ಗಂಟೆಯಿಂದ ದಿನಾಂಕ 14/11/2022 ರ ಬೆಳಿಗ್ಗೆ 10- 0 ಗಂಟೆಯವರೆಗೆ ಪ್ರವಾಸಿಗರು ಬರುವುದನ್ನು ನಿರ್ಬಂಧಿಸಲಾಗಿದೆ. ಹಾಗೂ ಲಾಂಗ್ ಚಾಸಿಸ್ಪುಳ್ಳ ವಾಹನಗಳ
ಸಂಚಾರವನ್ನು ಸಹ ನಿರ್ಬಂಧಿಸಲಾಗಿದೆ. * ಬಂಟಿಂಗ್ಸ್, ಬ್ಯಾನರ್ ಮತ್ತು ಪೋಸ್ಟರ್ಗಳನ್ನು ಅಳವಡಿಸಲು ಅನುಮತಿ ನೀಡುವ ಪೂರ್ವದಲ್ಲಿ ಸಂಬಂಧಪಟ್ಟ ಸ್ಥಳೀಯ ಪೊಲೀಸ್ ಆಧಿಕಾರಿಗಳಿಂದ ಕಡ್ಡಾಯವಾಗಿ ಅಭಿಪ್ರಾಯ ಪಡೆದು ಅನುಮತಿ ನೀಡುವಂತೆ ಜಿಲ್ಲಾಧಿಕಾರಿಗಳು ಸಂಬಂಧಪಟ್ಟ ಅಧಿಕಾರಿಗಳಿಗೆ ನಿರ್ದೇಶನ ನೀಡಿರುತ್ತಾರೆ.
ಕಲಂ 35 & 39 ಕರ್ನಾಟಕ ಪೊಲೀಸ್ ಆಕ್ಟ್ ಅಡಿಯಲ್ಲಿ ಕಾರ್ಯಕ್ರಮದ ಆಯೋಜಕರು ಶಾಂತಿ ಕಾಪಾಡುವ ಕುರಿತು ನಿರ್ದಿಷ್ಟ ನಿರ್ದೇಶನಗಳನ್ನು ನೀಡಿ ಮಾನ್ಯ ಜಿಲ್ಲಾಧಿಕಾರಿಗಳು ಅಧಿಸೂಚನೆಯನ್ನು ಹೊರಡಿಸಿರುತ್ತಾರೆ. > ದಿನಾಂಕ 13/11/2022 ರಂದು ಬೆಳಿಗ್ಗೆ 06-00 ಗಂಟೆಯಿಂದ ಮದ್ಯಾಹ್ನ 12-00 ಗಂಟೆಯವರೆಗೆ ಶೋಭಾ ಯಾತ್ರ ಮೆರವಣಿಗೆ ಸಾಗುವ ಮಾರ್ಗವಾದ ಚಿಕ್ಕಮಗಳೂರು ನಗರದ ಬಸವನಹಳ್ಳಿ ಮುಖ್ಯ ರಸ್ತೆ ಮತ್ತು ಎಂ.ಜಿ. ರಸ್ತೆಗಳಲ್ಲಿ ಎಲ್ಲಾ ರೀತಿಯ ವಾಹನಗಳ ನಿಲುಗಡೆ ಮತ್ತು ಸಂಚಾರವನ್ನು ನಿಷೇಧಿಸಿ ಮಾನ್ಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿರುತ್ತಾರೆ.
ದಿನಾಂಕ 13/11/20/22 ರಂದು ಬೆಳಿಗ್ಗೆ 11-00 ಗಂಟೆಯಿಂದ ರಾತ್ರಿ 11-00 ಗಂಟೆಯವರೆಗೆ ಚಿಕ್ಕಮಗಳೂರು ನಗರದ ಕೆ.ಎಂ.ರಸ್ತೆಯಲ್ಲಿ ಭಾರಿ ವಾಹನಗಳ ಸಂಚಾರವನ್ನು ನಿರ್ಬಂಧಿಸಿ, ಬೈಪಾಸ್ ರಸ್ತೆ ಮುಖಾಂತರ ರಾಂಪುರ ರಸ್ತೆಗೆ ಬದಲಿ ಮಾರ್ಗ ನಿಗದಿಪಡಿಸಿ ಮಾನ್ಯ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿರುತ್ತಾರೆ.