ಬಳ್ಳಾರಿ : ಬಳ್ಳಾರಿ: ವಿದ್ಯುತ್ ಸಂಪರ್ಕ ಕಡಿತಗೊಂಡ ಹಿನ್ನೆಲೆ ಬಳ್ಳಾರಿ ವಿಮ್ಸ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಕಾರ್ಯ ಸ್ಥಗಿತವಾಗಿ ಐಸಿಯುನಲ್ಲಿದ್ದ ಮೂವರು ರೋಗಿಗಳು ಸಾವನ್ನಪ್ಪಿದ ಪ್ರಕರಣ ಸಂಬಂಧ ವಿಮ್ಸ್ ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ, ಅಧೀಕ್ಷ ಸೇರಿದಂತೆ ನಾಲ್ವರಿಗೆ ನಿರ್ದೇಶಕ ಡಾ.ಗಂಗಾಧರ ಗೌಡ ನೋಟಿಸ್ ನೀಡಿದ್ದಾರೆ.
ಕರ್ತವ್ಯ ಲೋಪ ಆರೋಪದಡಿ ವಿಮ್ಸ್ ಆಸ್ಪತ್ರೆಯ ಸ್ಥಾನಿಕ ವೈದ್ಯಾಧಿಕಾರಿ ಡಾ.ರವಿ ಭೀಮಪ್ಪ, ವಿಮ್ಸ್ ಆಸ್ಪತ್ರೆಯ ವೈದ್ಯಾಧಿಕಾರಿ ಡಾ. ಯೋಗೇಶ್, ವಿಮ್ಸ್ ಆಸ್ಪತ್ರೆಯ ಡ್ಯೂಟಿ ಡಾಕ್ಟರ್ ಮಲ್ಲಿಕಾರ್ಜುನ ಖರ್ಗೆ, ನರ್ಸಿಂಗ್ ವಿಭಾಗದ ಅಧಿಕ್ಷಕಿ ನಾಗರತ್ನಗೆ ನೋಟಿಸ್ ನೀಡಲಾಗಿದೆ.
ಆಸ್ಪತ್ರೆಗೆ ವಿದ್ಯುತ್ ಸರಬರಾಜು ಮಾಡುವ ಮೇನ್ ಕೇಬಲ್ ಬ್ಲಾಸ್ಟ್ ಆದ ಪರಿಣಾಮ ವಿಮ್ಸ್ ಆಸ್ಪತ್ರೆಯಲ್ಲಿ ವಿದ್ಯುತ್ ಸಂಪರ್ಕ ಕಡಿತಗೊಂಡಿದೆ. ಹೀಗಾಗಿ ವಿಮ್ಸ್ ಆಸ್ಪತ್ರೆಯ ರೋಗಿಗಳು ಪರದಾಡುವಂತ ಸ್ಥಿತಿ ನಿರ್ಮಾಣವಾಗಿದ್ದಲ್ಲದೆ ಘಟನೆಯಲ್ಲಿ ಮೂವರು ರೋಗಿಗಳು ಸಾವನ್ನಪ್ಪಿದ್ದರು.