ಹಾವೇರಿ : ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯ ಜಿಲ್ಲೆಯಲ್ಲಿ ನಡೆಸಲು ಕನ್ನಡ ಸಾಹಿತ್ಯ ಪರಿಷತ್ನ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ನಿರ್ಧರಿಸಲಾಗಿದೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕಸಾಪ ರಾಜ್ಯಾಧ್ಯಕ್ಷ ಮಹೇಶ್ ಜೋಷಿ, ಹಾವೇರಿಯಲ್ಲಿ ಕಸಾಪ ಅಧ್ಯಕ್ಷರ ನೇತೃತ್ವದಲ್ಲಿ ಇಂದು ನಡೆದ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಮುಂದಿನ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಮಂಡ್ಯ ಜಿಲ್ಲೆಯಲ್ಲಿ ನಡೆಸಲು ತೀರ್ಮಾನಿಸಲಾಗಿದೆ. 9 ಜಿಲ್ಲೆಯವರು ತಮ್ಮ ಜಿಲ್ಲೆಯಲ್ಲಿ ಸಮ್ಮೇಳನ ನಡೆಸುವಂತೆ ಮನವಿ ಮಾಡಿದರು. ಈ ಮನವಿಗೆ ಹೆಚ್ಚಿನ ಜನರು ಬೆಂಬಲ ಸೂಚಿಸಿದ ಹಿನ್ನಲೆ ಮಂಡ್ಯ ಜಿಲ್ಲೆಯಲ್ಲಿ 87ನೇ ಕನ್ನಡ ಸಾಹಿತ್ಯ ಸಮ್ಮೇಳನ ನಡೆಸಲು ನಿರ್ಧರಿಸಲಾಗಿದೆ.
ಮುಂದಿನ ಕನ್ನಡ ಸಾಹಿತ್ಯ ಸಮ್ಮೇಳನ ಎಲ್ಲಿ ನಡೆಯಬೇಕು ಎಂಬ ಬಗ್ಗೆ ಮತ ಚಲಾಯಿಸಲಾಯಿತು. ಒಟ್ಟು 46 ಮತದಾರರು ತಮ್ಮ ಮತ ಚಲಾವಣೆ ಮಾಡಿದ್ದರು. ಈ ಪೈಕಿ 17 ಮತಗಳು ಮಂಡ್ಯ ಜಿಲ್ಲೆಗೆ ಬಂದಿದ್ದು, ಬಳ್ಳಾರಿ ಜಿಲ್ಲೆಗೆ 16 ಮತಗಳು ಬಂದವು. ಅತಿ ಹೆಚ್ಚು ಮತ ಪಡೆದ ಮಂಡ್ಯ ಜಿಲ್ಲೆಯಲ್ಲಿ ಮುಂದಿನ ಅಖಿಲ ಭಾರತ ಸಮ್ಮೇಳನ ನಡೆಸಲು ನಿರ್ಧರಿಸಲಾಯಿತು.
ʻWhatsAppʼನಿಂದ ಶೀಘ್ರದಲ್ಲೇ ಹೊಸ ವೈಶಿಷ್ಟ್ಯ: QR ಕೋಡ್ ಮೂಲಕ ʻಡೇಟಾʼ ವರ್ಗಾಯಿಸಲು ಅವಕಾಶ
ʻWhatsAppʼನಿಂದ ಶೀಘ್ರದಲ್ಲೇ ಹೊಸ ವೈಶಿಷ್ಟ್ಯ: QR ಕೋಡ್ ಮೂಲಕ ʻಡೇಟಾʼ ವರ್ಗಾಯಿಸಲು ಅವಕಾಶ