ಬೆಂಗಳೂರು : ಆಹಾರ ಮತ್ತು ನಾಗರಿಕ ಪೂರೈಕೆ ಹಾಗೂ ಅರಣ್ಯ ಖಾತೆ ಸಚಿವ ಉಮೇಶ್ ಕತ್ತಿ ಅವರು ಮಂಗಳವಾರ ರಾತ್ರಿ ತೀವ್ರ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.
ಉಮೇಶ್ ಕತ್ತಿ ನಿಧನಕ್ಕೆ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಸಂತಾಪ ಸೂಚಿಸಿದ್ದು, ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವರಾದ ಉಮೇಶ್ ಕತ್ತಿ ಅವರ ನಿಧನದಿಂದ ನನಗೆ ತೀವ್ರ ಆಘಾತವಾಗಿದೆ. ಜನತಾ ಪರಿವಾರದ ಹಿರಿಯರಾಗಿದ್ದ ಕತ್ತಿ ಅವರು ಸ್ನೇಹಜೀವಿ ಆಗಿದ್ದರಲ್ಲದೆ, ತಮ್ಮ ನೇರ ನಡೆ ನುಡಿಯಿಂದ ನಮ್ಮೆಲ್ಲರ ಪ್ರೀತಿ ಗೌರವಕ್ಕೆ ಪಾತ್ರರಾಗಿದ್ದರು. ಉಮೇಶ್ ಕತ್ತಿ ಅವರ ಆತ್ಮಕ್ಕೆ ಚಿರಶಾಂತಿ ಸಿಗಲಿ ಹಾಗೂ ಅವರ ಅಗಲಿಕೆಯ ದುಃಖ ಭರಿಸುವ ಶಕ್ತಿಯನ್ನು ಕುಟುಂಬ ಸದಸ್ಯರಿಗೆ ದೇವರು ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ ಎಂದು ಹೇಳಿದ್ದಾರೆ.
ಆಹಾರ ಮತ್ತು ನಾಗರೀಕ ಸರಬರಾಜು ಖಾತೆ ಸಚಿವರಾದ ಶ್ರೀ ಉಮೇಶ್ ಕತ್ತಿ ಅವರ ನಿಧನದಿಂದ ನನಗೆ ತೀವ್ರ ಆಘಾತವಾಗಿದೆ.
ಜನತಾ ಪರಿವಾರದ ಹಿರಿಯರಾಗಿದ್ದ ಶ್ರೀ ಕತ್ತಿ ಅವರು ಸ್ನೇಹಜೀವಿ ಆಗಿದ್ದರಲ್ಲದೆ, ತಮ್ಮ ನೇರ ನಡೆ ನುಡಿಯಿಂದ ನಮ್ಮೆಲ್ಲರ ಪ್ರೀತಿ ಗೌರವಕ್ಕೆ ಪಾತ್ರರಾಗಿದ್ದರು.1/2 pic.twitter.com/xXsq7gu43x
— H D Kumaraswamy (@hd_kumaraswamy) September 7, 2022
ಬೆಂಗಳೂರಿನಲ್ಲಿ ರಾತ್ರಿ ಭೋಜನ ಸ್ವೀಕರಿಸಿದ ಬಳಿಕ ಶೌಚಾಲಯಕ್ಕೆ ತೆರಳಿದ ವೇಳೆ ಹೃದಯಾಘಾತ ಸಂಭವಿಸಿದೆ. ಅಲ್ಲೇ ಕುಸಿದು ಬಿದ್ದಿದ್ದ ಅವರನ್ನು ಸಮೀಪದ ಎಸ್.ಎಂ. ರಾಮಯ್ಯ ಆಸ್ಪತ್ರೆಗೆ ಕರೆತಂದು ಚಿಕಿತ್ಸೆ ನೀಡಿದರೂ ಚಿಕಿತ್ಸೆ ಫಲಿಕಾರಿಯಾಗದೇ ಸಾವನ್ನಪ್ಪಿದ್ದಾರೆ. ಅವರು ಪತ್ನಿ, ಪುತ್ರ ಹಾಗೂ ಪುತ್ರಿಯನ್ನು ಅಗಲಿದ್ದಾರೆ.