ಹುಬ್ಬಳ್ಳಿ : ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿಗಾಗಿ ಆಗ್ರಹಿಸಿ ಇಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ನಿವಾಸದ ಬಳಿ ಬೃಹತ್ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು ಪಂಚಮಸಾಲಿ ಸಮಾಜದ ಕೂಡಲಸಂಗಮದ ಶ್ರೀ ಬಸವಜಯ ಮೃತ್ಯುಂಜಯ ಮಹಾಸ್ವಾಮಿಗಳು ಹೇಳಿದರು.

ಮದುವೆ ಕೇವಲ ಲೈಂಗಿಕ ಸುಖಕ್ಕಾಗಿ ಅಲ್ಲ, ಅದರ ಮುಖ್ಯ ಉದ್ದೇಶ ಸಂತಾನೋತ್ಪತ್ತಿ: ಹೈಕೋರ್ಟ್

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಶ್ರೀಗಳು, ಲಿಂಗಾಯತ ಪಂಚಮಸಾಲಿ ಸಮಾಜದ ಹೋರಾಟದ ಗಡವಿಗೆ ಸರ್ಕಾರ ಮಾತು ತಪ್ಪಿದೆ. ಈ ಹಿನ್ನಲೆಯಲ್ಲಿ ಮೀಸಲಾತಿಗಾಗಿ ಆಗ್ರಹಿಸಿ ಮಂಗಳವಾರ ಬೆಳಗ್ಗೆ 9 ಗಂಟೆಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಹಾವೇರಿ ಜಿಲ್ಲೆ ಶಿಗ್ಗಾವಿಯಲ್ಲಿರುವ ಅವರ ಮನೆ ಮುಂದೆ ಒಂದು ದಿನದ ಬೃಹತ್ ಧರಣಿ ಸತ್ಯಾಗ್ರಹ ಮಾಡಲಾಗುವುದು ಎಂದು  ತಿಳಿಸಿದ್ದಾರೆ.

ಮಂಗಳವಾರ ಬೆಳಗ್ಗೆ 9 ಗಂಟೆಗೆ  ಶಿಗ್ಗಾಂವದ ಚೆನ್ನಮ್ಮನ ವೃತ್ತದಿಂದ ರ್ಯಾಲಿ ಮೂಲಕ ಒಂದು ಲಕ್ಷ ಪಂಚಮಸಾಲಿಗರೊಂದಿಗೆ ಮುಖ್ಯಮಂತ್ರಿಗಳ ಮನೆ ಮುಂದೆ ಸತ್ಯಾಗ್ರಹ ಹಮ್ಮಿಕೊಳ್ಳಲಾಗುವುದು. ಮುಖ್ಯಮಂತ್ರಿಗಳು ನಮ್ಮ ಬೇಡಿಕೆಗಳನ್ನು ಈಡೇರಿಸದಿದ್ದರೆ ನಾವು ನ್ಯಾಯಯುತವಾಗಿ, ಅಕ್ಟೊಬರ್ ಹಾಗೂ ನವೆಂಬರ್ ತಿಂಗಳಿನಲ್ಲಿ 25 ಲಕ್ಷ ಪಂಚಮಸಾಲಿಗರೊಂದಿಗೆ ಬೆಂಗಳೂರಿನಲ್ಲಿ ಬೃಹತ್ ಶಕ್ತಿ ಪ್ರದರ್ಶನ ಮಾಡುವ ಮೂಲಕ ಮೀಸಲಾತಿಯ ಹಕ್ಕನ್ನು ನಾವು ಪಡೆದುಕೊಳ್ಳುತ್ತೇವೆ ಎಂದು ತಿಳಿಸಿದ್ದಾರೆ.

Share.
Exit mobile version