ಬೆಂಗಳೂರು : ರಾಜ್ಯದ ಸರ್ಕಾರಿ ಶಾಲೆಗಳ ಮಕ್ಕಳ ಆರೋಗ್ಯವನ್ನು ತಪಾಸಿಸಿ ವಾರ್ಷಿಕ ಅಂಕಪಟ್ಟಿ ಜೊತೆಗೆ ಡಿಜಿಟಲ್ ಆರೋಗ್ಯ ಕಾರ್ಡ್ ವಿತರಣೆಗೆ ಆರೋಗ್ಯ ಇಲಾಖೆ ಒಪ್ಪಿಗೆ ನೀಡಿದೆ ಎಂದು ಪ್ರೊ.ಎಂ.ಆರ್.ದೊರೆಸ್ವಾಮಿ ಮಾಹಿತಿ ನೀಡಿದ್ದಾರೆ.
ದೆಹಲಿ: ಚುನಾವಣಾ ಪ್ರಚಾರದ ವೇಳೆ ಕಾಂಗ್ರೆಸ್ ನಾಯಕಿಯ ಕಾರು ಕಳ್ಳತನ…. ಸಿಸಿಕ್ಯಾಮೆರಾದಲ್ಲಿ ದೃಶ್ಯ ಸೆರೆ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸರ್ಕಾರಿ ಶಾಲೆಗಳ ಮಕ್ಕಳ ಶಿಕ್ಷಣದ ಜೊತೆಗೆ ಆರೋಗ್ಯದ ಬಗ್ಗೆಯೂ ಕಾಳಜಿ ವಹಿಸಬೇಕಾಗಿದ್ದು, ಈ ಹಿನ್ನೆಲೆಯಲ್ಲಿ ಮಕ್ಕಳಿಗೆ ವಾರ್ಷಿಕ ಅಂಕಪಟ್ಟಿ ಜೊತೆಗೆ ಡಿಜಿಟಲ್ ಆರೋಗ್ಯ ಕಾರ್ಡ್ ವಿತರಣೆಗೆ ನಿರ್ಧರಿಸಲಾಗಿದೆ ಎಂದು ತಿಳಿಸಿದ್ದಾರೆ.
ರಾಜ್ಯದ 48 ಸಾವಿರ ಶಾಲೆಗಳ ಮಕ್ಕಳ ಸಮಗ್ರ ಆರೋಗ್ಯ ತಪಾಸಣೆ ಒಂದು ಇಲಾಖೆಯಿಂದ ಸಾಧ್ಯವಿಲ್ಲ. ಹೀಗಾಗಿ ಸರ್ಕಾರಿ, ಖಾಸಗಿ ವೈದ್ಯಕೀ ಮತ್ತು ನರ್ಸಿಂಗ್ ಕಾಲೇಜುಗಳ ಸಹಭಾಗಿತ್ವದಲ್ಲಿ ನಿರ್ವಹಿಸಲು ಕೋರಲಾಗಿದೆ. ತಪಾಸಣೆ ಕಾಲಕ್ಕೆ ಕಣ್ಣು ದೋಷ, ಹಲ್ಲು ನೋವು ಮುಂತಾದ ಸಣ್ಣ ಪುಟ್ಟ ಆರೋಗ್ಯ ಸಮಸ್ಯೆಗಳಿಗೆ ಪರಿಹಾರ ಒದಗಿಸಲು ತಿಳಿಸಲಾಗಿದೆ. ಜೊತೆಗೆ ಪರೀಕ್ಷಾ ಫಲಿತಾಂಶ ಅಂಕಪಟ್ಟಿ ಜೊತೆಗೆ ಮಕ್ಕಳಿಗೆ ಹೆಲ್ತ್ ಕಾರ್ಡ್ ವಿತರಿಸಿದರೆ ಮಕ್ಕಳ ಆರೋಗ್ಯದ ಬಗ್ಗೆ ನಿಗಾ ವಹಿಸಲು ಅನುಕೂಲವಾಗಲಿದೆ ಎಂದು ಹೇಳಿದ್ದಾರೆ.
Good News : ರಾಜ್ಯದ ಶಾಲಾ ಮಕ್ಕಳಿಗೆ ಮತ್ತೊಂದು ಗುಡ್ ನ್ಯೂಸ್ : ಶೀಘ್ರವೇ ಮಕ್ಕಳಿಗೆ ಟೆಟ್ರಾ ಪ್ಯಾಕ್ ಹಾಲು ವಿತರಣೆ